ಮತ್ತಷ್ಟು ‘ಶಕ್ತಿ’: KSRTCಗೆ ಶೀಘ್ರವೇ 2,000 ಬಸ್ ಖರೀದಿ, ಸಚಿವ ರಾಮಲಿಂಗ ರೆಡ್ಡಿ ಘೋಷಣೆ

ಬೆಂಗಳೂರು: ರಾಜ್ಯಸರ್ಕಾರದ ‘ಶಕ್ತಿ’ ಗ್ಯಾರೆಂಟಿ ಯೋಜನೆ ಮಹಿಳೆಯರ ಪಾಲಿಗೆ ವರದಾನವಾಗಿದೆ. ಇದೀಗ ಈ ‘ಗ್ಯಾರೆಂಟಿ’ ಯೋಜನೆಯನ್ನು ಮತ್ತಷ್ಟು ವರದಾನವಾಗಿಸುವ ನಿಟ್ಟಿನಲ್ಲಿ KSRTC ಮಹತ್ವದ ಹೆಜ್ಜೆ ಇಟ್ಟಿದೆ.

ಶಕ್ತಿ ಯೋಜನೆಯ ಫಲಾನುಭವಿ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿರುವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಶೀಘ್ರವೇ 2,000 ಬಸ್ ಗಳನ್ನು ಖರೀದಿ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಸಾರಿಗೆ ಸೌಲಭ್ಯ ಹೆಚ್ಚಿಸಲು ಹೊಸದಾಗಿ 2 ಸಾವಿರ ಬಸ್‌ಗಳನ್ನು ಖರೀದಿ ಮಾಡಲಾಗುತ್ತಿದೆ. ಶಕ್ತಿ ಯೋಜನೆಯ ಪರಿಣಾಮ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರ ಸಂಚಾರ ಹೆಚ್ಚಾಗಿದೆ. ಹೀಗಾಗಿ ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು ಶೀಘ್ರವೇ ಬಸ್‌ಗಳ ಖರೀದಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಮಾಹಿತಿ ಹಂಚಿಕೊಂಡಿದ್ದಾರೆ.

Related posts