ದೆಹಲಿ: ಕ್ಷಿಪ್ರ ನಿರ್ಧಾರವೊಂದರಲ್ಲಿ ರಿಸರ್ವ್ ಬ್ಯಾಂಕ್ 2000 ರೂಪಾಯಿ ನೋಟುಗಳ ಚಲಾವಣೆಯನ್ನು ಹಿಂಪಡೆಯುವ ನಿರ್ಧಾರ ಪ್ರಕಟಿಸಿದೆ. ಕಪ್ಪು ಹಣ ಹೊಂದಿರುವ ಕುಳಗಳಿಗೆ ಈ ಮೂಲಕ ಕೇಂದ್ರ ಸರ್ಕಾರ ಮತ್ತೊಮ್ಮೆ ಶಾಕ್ ನೀಡಿದೆ.
2000 ರೂಪಾಯಿ ಮುಖಬೆಲೆಯ ನೋಟುಗಳನ್ನು ಗ್ರಾಹಕರಿಗೆ ವಿತರಿಸದಂತೆ ದೇಶದ ಎಲ್ಲಾ ಬ್ಯಾಂಕ್ ಗಳಿಗೆ ಸೂಚಿಸಿರುವ ಆರ್‌ಬಿಐ, ಮೇ 23 ರಿಂದ ಸೆಪ್ಟೆಂಬರ್ 30ರ ವರೆಗೆ 2,000 ರೂಪಾಯಿ ಮುಖಬೆಲೆಯ ನೋಟುಗಳನ್ನು ಕಾನೂನುಬದ್ಧವಾಗಿ ಬ್ಯಾಂಕ್ ಗಳಲ್ಲಿ ವಿನಿಮಯ ಮಾಡಿಕೊಳ್ಳಬಹುದು ಎಂದು ಹೇಳಿದೆ
ಒಂದು ಬಾರಿಗೆ 20 ಸಾವಿರ ರೂಪಾಯಿವರೆಗೆ ವಿನಿಮಯ ಮಾಡಿಕೊಳ್ಳಲು ಅಥವಾ ಜಮೆ ಮಾಡಲು ಅವಕಾಶ ಇದೆ ಎಂದು ರಿಸರ್ವ್ ಬ್ಯಾಂಕ್ ತಿಳಿಸಿದೆ.