ತವರಿನಲ್ಲಿ RCB ಕಳಪೆ ಪ್ರದರ್ಶನ; ಬೆಂಗಳೂರು ಅಭಿಮಾನಿಗಳಿಗೆ ನಿರಾಸೆ

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ಐಪಿಎಲ್ 2025ರ ಬೆಂಗಳೂರು ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಹೀನಾಯ ಸೋಲಿನ ರುಚಿ ಅನುಭವಿಸುವಂತಾಯ್ತು.

ಬುಧವಾರ ತವರಿನಲ್ಲಿ ಮೊದಲ ಪಂದ್ಯವನ್ನಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತನ್ನ ಎದುರಾಳಿ ಗುಜರಾತ್ ಟೈಟನ್ಸ್ ವಿರುದ್ಧ ಸೋಲು ಕಂಡಿದೆ.

ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಗುಜರಾತ್ ಟೈಟಾನ್ಸ್ ಅದ್ಭುರ್ತ ಆಟ ಪ್ರದರ್ಶಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ RCB ತಂಡ 20 ಓವರ್‌ಗಳಲ್ಲಿ ಎಂಟು ವಿಕೆಟ್‌ಗಳ ನಷ್ಟಕ್ಕೆ 169 ರನ್ ಗಳಿಸಿ 169 ರನ್‌ ಪೇರಿಸಿತ್ತು. ಲಿಯಾಮ್ ಲಿವಿಂಗ್‌ಸ್ಟೋನ್ ಅವರ ಅರ್ಧಶತಕದ ನೆರವಿನಿಂದ ಈ ಮೊತ್ತ ಸಂಪಾದಿಸುವಲ್ಲಿ RCB ಯಶಸ್ಸಾಗಿತ್ತು. ಆದರೆ, ಗುಜರಾತ್ ಟೈಟಾನ್ಸ್ ಅಬ್ಬರದ ಆಟದ ನಡುವೆ RCB ಮಂಕಾಯಿತು. 170 ರನ್ ಗಳ ಗುರಿ ಬೆನ್ನಟ್ಟಿದ ಗುಜರಾತ್ ಟೈಟಾನ್ಸ್ 2 ವಿಕೆಟ್ ನಷ್ಟಕ್ಕೆ 170 ರನ್ ಗಳಿಸಿ ಜಯಭೇರಿ ಬಾರಿಸಿತು.

Related posts