ತೆಲಂಗಾಣದ ನೂತನ ಸಿಎಂ ಸ್ಥಾನಕ್ಕೆ ರೇವಂತ್‌ ರೆಡ್ಡಿ ಆಯ್ಕೆ; ಡಿ.7ರಂದು ಪ್ರಮಾಣ ವಚನ ಸಾಧ್ಯತೆ

ಹೊಸದಿಲ್ಲಿ: ತೆಲಂಗಾಣದಲ್ಲಿ ಜಯಭೇರಿ ಭಾರಿಸಿರುವ ಕಾಂಗ್ರೆಸ್ ಪಕ್ಷ ಸರ್ಕಾರ ರಚನೆಗೆ ಕಸರತ್ತು ನಡೆಸಿದೆ. ಇದೇ ವೇಳೆ ನೂತನ ಮುಖ್ಯಮಂತ್ರಿ ಸ್ಥಾನಕ್ಕೆ ರೇವಂತ್‌ ರೆಡ್ಡಿ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಸೂಚಿಸಿದೆ.

ಹೊಸದಿಲ್ಲಿಯಲ್ಲಿ ನಡೆದ ಎಐಸಿಸಿ ನಾಯಕರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಎಐಸಿಸಿ ನಾಯಕರ ಸಭೆಯ ನಂತರ ಸುದ್ದಿಗಾರರಿಗೆ ಮಾಹಿತಿ ನೀಡಿದ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್‌, ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷರಾಗಿರುವ ರೇವಂತ್ ರೆಡ್ಡಿ ಅವರನ್ನು ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.

ಇದೇ ವೇಳೆ, ಡಿಸೆಂಬರ್ 7 ರಂದು ನೂತನ ಸಿಎಂ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

Related posts