ಬಿಡುಗಡೆಗೆ ಮುನ್ನವೇ ‘ರಾಬರ್ಟ್’ ಹವಾ; ದರ್ಶನ್ ಅಭಿಮಾನಿಗಳು ಫುಲ್ ಖುಷ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಚಿತ್ರ ಬಿಡುಗಡೆಗೂ ಮುನ್ನವೇ ಹವಾ ಎಬ್ಬಿಸಿದೆ. ಈಗಾಗಲೇ ಚಿತ್ರೀಕರಣ ಪೂರ್ಣಗೊಂಡಿದ್ದು ಯಜಮಾನನ ಸಿನಿಮಾ ಬಗ್ಗೆ ಅಭಿಮಾನಿಗಳ ಕುತೂಹಲ ಹೆಚ್ಚಾಗಿದೆ.

ರಂಜಾನ್ ಹಬ್ಬದ ಸಂದರ್ಭದಲ್ಲಿ ಚಿತ್ರದ ಪೋಸ್ಟರ್ ಬಿಡುಗಡೆ ಮಾಡುವುದಾಗಿ ಹೇಳಿದ್ದ ಚಿತ್ರ ತಂಡ ಅದರಂತೆಯೇ ಫಾಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಿದೆ. ತರುಣ್ ಸುಧೀರ್ ‘ರಾಬರ್ಟ್’ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಇದರ ಫರ್ಸ್ಟ್ ಲುಕ್ ಮೋಷನ್ ಪೋಸ್ಟರ್’ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಕತ್ ರೆಸ್ಪಾನ್ಸ್ ಸಿಗುತ್ತಿದೆ.

Related posts