ಪುಣ್ಯಕ್ಷೇತ್ರಗಳ ನದಿಗಳಲ್ಲಿ ಸೋಪ್- ಶಾಂಪೂ ಬಳಕೆಗೆ ಸರ್ಕಾರ ಕಡಿವಾಣ

ಬೆಂಗಳೂರು: ಪುಣ್ಯಕ್ಷೇತ್ರಗಳ ನದಿಗಳಲ್ಲಿ ಸೋಪ್- ಶಾಂಪೂ ಬಳಕೆಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ.

ಪರಿಸರ ಸ್ನೇಹಿ ಕ್ರಮವಾಗಿ, ಪುಣ್ಯಕ್ಷೇತ್ರಗಳ ನದಿಗಳು ಮತ್ತು ಕಲ್ಯಾಣಿ ಸುತ್ತಮುತ್ತ 500 ಮೀಟರ್ ವ್ಯಾಪ್ತಿಯಲ್ಲಿ ಸೋಪ್ ಮತ್ತು ಶಾಂಪೂ ಮಾರಾಟವನ್ನು ನಿಷೇಧಿಸಲು ಅರಣ್ಯ ಹಾಗೂ ಪರಿಸರ ಸಚಿವ ಈಶ್ವರ್‌ ಖಂಡ್ರೆ ಸೂಚನೆ ನೀಡಿದ್ದೇನೆ.

ನದಿಯಲ್ಲಿ ಸ್ನಾನ ಮಾಡುವ ಭಕ್ತರು ತ್ಯಜಿಸುವ ಶಾಂಪೂ ಪ್ಯಾಕೆಟ್‌ಗಳು ಮತ್ತು ಸಣ್ಣ ಸೋಪ್‌ಗಳು ನೀರನ್ನು ಮಾಲಿನ್ಯಗೊಳಿಸುತ್ತಿದ್ದು, ಇದು ಜನರ ಮತ್ತು ಜಲಚರ ಪ್ರಾಣಿಗಳ ಆರೋಗ್ಯಕ್ಕೆ ತೀವ್ರ ಹಾನಿಯನ್ನು ಉಂಟುಮಾಡುತ್ತಿದೆ ಎಂದವರು ಪ್ರತಿಪಾದಿಸಿದ್ದಾರೆ.

ಅಲ್ಲದೆ, ಯಾತ್ರಾಸ್ಥಳಗಳಲ್ಲಿ ಬಟ್ಟೆ ತ್ಯಜಿಸುವ ಪ್ರವೃತ್ತಿ ಗಮನಕ್ಕೆ ಬಂದಿರುವುದರಿಂದ, ಇದನ್ನು ತಡೆಗಟ್ಟಲು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಲಾಗುತ್ತದೆ ಎಂದವರು ತಿಳಿಸಿದ್ದಾರೆ.

Related posts