ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ಶೈಕ್ಷಣಿಕ ವ್ಯವಸ್ಥೆಯೇ ಅಲ್ಲೋಲಕಲ್ಲೋಲವಾಗಿದ್ದು ಶಿಕ್ಷಣ ಸಂಸ್ಥೆಗಳೂ ಸಂಕಷ್ಟ ಎದುರಿಸುತ್ತಿದೆ. ಅದರಲ್ಲೂ ಶುಲ್ಕ ವಿಚಾರದಲ್ಲಿ ಪೋಷಕರು, ಸರ್ಕಾರ ಹಾಗೂ ಶಿಕ್ಷಣ ಸಂಸ್ಥೆಗಳ ನಡುವೆ ಜಟಾಪಟಿ ನಡೆದಿದೆ.
ಈ ನಡುವೆ ಅನುದಾನಿತ ಶಾಲೆಗಳ ಶುಲ್ಕಗಳನ್ನು ಇನ್ನೆರಡು ದಿನಗಳಲ್ಲಿ ನಿಗದಿಪಡಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ.
ಶಿವಮೊಗ್ಗದಲ್ಲಿ ಈ ಕುರಿತಂತೆ ಮಾಹಿತಿ ಹಂಚಿಕೊಂಡ ಸಚಿವ ಸುರೇಶ ಕುಮಾರ್, ಶುಲ್ಕ ನಿಗದಿ ಪಡಿಸುವ ಕುರಿತು ಎಲ್ಲಾ ಅಂಶಗಳನ್ನು ಪರಿಗಣಿಸಬೇಕಿದೆ. ಒಂದೆಡೆ ಕೊರೋನಾದಿಂದ ಸಂಕಷ್ಟಕ್ಕೆ ಸಿಲುಕಿರುವ ಪೋಷಕರ ಆರ್ಥಿಕ ಸ್ಥಿತಿಗತಿ ಹಾಗೂ ಹದಗೆಟ್ಟಿರುವ ಶಾಲೆಗಳ ಸ್ಥಿತಿಗತಿಗಳನ್ನು ಕೂಡ ಪರಿಗಣಿಸಬೇಕಿದೆ. ಯಾರಿಗೂ ಅನ್ಯಾಯವಾಗದಂತೆ ಶುಲ್ಕ ನಿಗದಿಪಡಿಸಲಾಗುವುದು ಎಂದರು.