ಶುಲ್ಕಕ್ಕಾಗಿ ಒತ್ತಡ ಹೆರುವ ಶಾಲೆಗಳ ವಿರುದ್ಧ ಶಿಕ್ಷಣ ಹಕ್ಕು ಕಾಯಿದೆಯಡಿ ಶಿಸ್ತುಕ್ರಮ

ಬೆಂಗಳೂರು: ಕೊರೋನಾ ಸಂಕಟ ಕಾಲದಲ್ಲಿ ಮಾರ್ಗಸೂಚಿ ಜಾರಿಯಲ್ಲಿದ್ದು ಯಾವುದೇ ಶಾಲೆಗಳು ಶುಲ್ಕ ಪಾವತಿಗಾಗಿ ಮಕ್ಕಳ ಹಾಗೂ ಪೋಷಕರ ಮೇಲೆ ಒತ್ತಡ ಹೇರಬಾರದೆಂದು ಸರ್ಕಾರ ಎಚ್ಚರಿಕೆ ನೀಡಿದೆ. ಆದರೂ ಅನೇಕ ಶಾಲೆಗಳು ಶುಲ್ಕ ಸಂಬಂಧ ಒತ್ತಡ ಹೇರುತ್ತಲೇ ಇವೆ.

ಈ ಕುರಿತಂತೆ ಶಿಕ್ಷಣಾಧಿಕಾರಿಗಳಿಗೆ ಪೋಷಕರಿಂದ ದೂರುಗಳು ಕೇಳಿಬರುತ್ತಲೇ ಇವೆ. ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಸರ್ಕಾರ ಶುಲ್ಕ ಪಾವತಿಸಲು ಸಾಧ್ಯವಿಲ್ಲದ ಅಥವಾ ಪಾವತಿಸಲು ನಿರಾಕರಿಸುವ ಪೋಷಕರಿಂದ ಮುಂದಿನ ಆದೇಶದವರೆಗೆ ಯಾವುದೇ ಕಾರಣಕ್ಕೂ ಶುಲ್ಕ ವಸೂಲಿ ಮಾಡುವಂತಿಲ್ಲ ಎಂದು  ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಮೂಲಕ ಖಾಸಗಿ ಶಾಲೆಗಳಿಗೆ ಎಚ್ಚರಿಕೆ ನೀಡಿದೆ.

ಶುಲ್ಕ ಪಾವತಿಗೆ ಒತ್ತಡ ಹೆರುವ, ಶುಲ್ಕ ಪಾವತಿಸದ ವಿದ್ಯಾರ್ಥಿಗಳನ್ನು ಶಾಲೆಯಿಂದ ಹೊರಹಾಕುವ ಬೆದರಿಕೆ ಹಾಕುವ ದೂರುಗಳು ಬಂದಲ್ಲಿ ಅಂತಹ ಶಾಲೆಗಳ ವಿರುದ್ಧ ಶಿಕ್ಷಣ ಹಕ್ಕು ಕಾಯಿದೆಯಡಿ ಶಿಸ್ತುಕ್ರಮ ಕೈಗೊಳ್ಳುವುದಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

Related posts