ಬೆಂಗಳೂರು: ಕೊರೋನಾ ಸಂಕಟ ಕಾಲದಲ್ಲಿ ಶಾಲೆಗಳನ್ನು ಪುನರಾರಂಭಿಸಲು ಮುಂದಾಗಿರುವ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅಸಮಾಧಾನ ಹೊರಹಾಕಿದ್ದಾರೆ.
ಕೆಲ ದಿನಗಳಿಂದ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ವ್ಯಕ್ತಪಡಿಸಿರುವ ಹೆಚ್ಡಿಕೆ, ಎತ್ತಿಗೆ ಜ್ವರ ಬಂದರೆ ಕೋಣಕ್ಕೆ ಬರೆ ಎಂಬಂತೆ ಸರ್ಕಾರ ವರ್ತಿಸುತ್ತಿದೆ. ಕೊರೊನಾದ ಸಂಕಷ್ಟದ ಸಮಯದಲ್ಲೂ ರಾಜ್ಯದ ಸರಕಾರಿ ಹಾಗೂ ಖಾಸಗಿ ಶಾಲೆಗಳ ಶಿಕ್ಷಕರು ಶಾಲೆಗಳಿಗೆ ತೆರಳಿ ಕೆಲಸ ಮಾಡುತ್ತಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ.
ಶಿಕ್ಷಕ ಸಮೂಹವನ್ನು ಗೌರವದಿಂದ ನಡೆಸಿಕೊಳ್ಳಬೇಕಾದ ಸರಕಾರ, ದರ್ಪದ ಆದೇಶಗಳನ್ನು ಜಾರಿ ಮಾಡಿ, ಶಾಪಕ್ಕೆ ಗುರಿಯಾಗುತ್ತಿದೆ. ‘ಹರ ಮುನಿದರೂ ಗುರು ಕಾಯ್ವನು’ ಎಂಬುದನ್ನು ಸರಕಾರ ಮರೆಯಬಾರದು. ರಾಜ್ಯ ಸರ್ಕಾರ ಅಕ್ಟೋಬರ್ 1 ರಂದು ಮಧ್ಯಂತರ ರಜಾ ರದ್ದುಪಡಿಸಿ ಹೊರಡಿಸಿರುವ ಆದೇಶವನ್ನು ಕೂಡಲೇ ವಾಪಸ್ ಪಡೆದು ಶಿಕ್ಷಕರಿಗೆ ಮಧ್ಯಂತರ ರಜೆ ಘೋಷಿಸಬೇಕು ಎಂದು ಕುಮಾರಸ್ವಾಮಿ ಸಲಹೆ ಮಾಡಿದ್ದಾರೆ.
ಎತ್ತಿಗೆ ಜ್ವರ ಬಂದರೆ ಕೋಣಕ್ಕೆ ಬರೆ ಎಂಬಂತೆ ಸರ್ಕಾರ ವರ್ತಿಸುತ್ತಿದೆ. ಕೊರೊನಾದ ಸಂಕಷ್ಟದ ಸಮಯದಲ್ಲೂ ರಾಜ್ಯದ ಸರಕಾರಿ ಹಾಗೂ ಖಾಸಗಿ ಶಾಲೆಗಳ ಶಿಕ್ಷಕರು ಶಾಲೆಗಳಿಗೆ ತೆರಳಿ ಕೆಲಸ ಮಾಡುತ್ತಿದ್ದಾರೆ.
1/5— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 11, 2020
ಈ ವರ್ಷದ ಅಕ್ಟೋಬರ್ 3 ರಿಂದ 26 ರವರೆಗೆ ನೀಡಬೇಕಿದ್ದ ಮಧ್ಯಂತರ ರಜೆಯನ್ನು ಸರ್ಕಾರ ರದ್ದು ಮಾಡಿರುವುದಕ್ಕೆ ಆಧಾರ ಏನು? ಶಿಕ್ಷಕರೆಂದರೆ ಸರ್ವಾಧಿಕಾರದ ಕೆಳಗೆ ದುಡಿಯುವ ದಿನಗೂಲಿ ನೌಕರರೆ?
3/5— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 11, 2020
ಕೊರೊನ ಕಾರಣಕ್ಕೆ ಮಕ್ಕಳು ಶಾಲೆಗೆ ಬಾರದಿದ್ದರೂ ಶಿಕ್ಷಕರನ್ನು ಅನ್ಯ ಸೇವೆಗೆ ಯಥೇಚ್ಛವಾಗಿ ಬಳಸಲಾಗುತ್ತಿದೆ. ಆದಾಗ್ಯೂ ಮಧ್ಯಂತರ ರಜೆ ರದ್ದುಪಡಿಸಿ ಸರಕಾರ ಯಾವ ಪುರುಷಾರ್ಥ ಸಾಧನೆಗೆ ಹೊರಟಿದೆ?
4/5— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 11, 2020
ಸರಕಾರಿ ಶಾಲೆ ಶಿಕ್ಷಕರು ಕೋವಿಡ್ ಕರ್ತವ್ಯ ಹಾಗೂ ವಿದ್ಯಾಗಮ ಯೋಜನೆಯಡಿ ಈ ದಿನದ ತನಕ ಕೆಲಸ ಮಾಡಿದ್ದಾರೆ. ಆದರೆ ರಾಜ್ಯ ಸರಕಾರ ಈ ವರ್ಷ ಶೈಕ್ಷಣಿಕ ವರ್ಷದ ಮಧ್ಯಂತರ ರಜೆಯನ್ನು ರದ್ದುಗೊಳಿಸಿ ಶಿಕ್ಷಕರನ್ನು ನಿಕೃಷ್ಟವಾಗಿ ನಡೆಸಿಕೊಳ್ಳುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಈ ವರ್ಷದ ಅಕ್ಟೋಬರ್ 3 ರಿಂದ 26 ರವರೆಗೆ ನೀಡಬೇಕಿದ್ದ ಮಧ್ಯಂತರ ರಜೆಯನ್ನು ಸರ್ಕಾರ ರದ್ದು ಮಾಡಿರುವುದಕ್ಕೆ ಆಧಾರ ಏನು? ಶಿಕ್ಷಕರೆಂದರೆ ಸರ್ವಾಧಿಕಾರದ ಕೆಳಗೆ ದುಡಿಯುವ ದಿನಗೂಲಿ ನೌಕರರೆ ಎಂದು ಹೆಚ್ಡಿಕೆ ಪ್ರಶ್ನಿಸಿದ್ದಾರೆ.
ಕೊರೊನ ಕಾರಣಕ್ಕೆ ಮಕ್ಕಳು ಶಾಲೆಗೆ ಬಾರದಿದ್ದರೂ ಶಿಕ್ಷಕರನ್ನು ಅನ್ಯ ಸೇವೆಗೆ ಯಥೇಚ್ಛವಾಗಿ ಬಳಸಲಾಗುತ್ತಿದೆ. ಆದಾಗ್ಯೂ ಮಧ್ಯಂತರ ರಜೆ ರದ್ದುಪಡಿಸಿ ಸರಕಾರ ಯಾವ ಪುರುಷಾರ್ಥ ಸಾಧನೆಗೆ ಹೊರಟಿದೆ ಎಂದು ಅವರು ಸರ್ಕಾರವನ್ನು ಕೆಣಕಿದ್ದಾರೆ.
ಶಿಕ್ಷಕ ಸಮೂಹವನ್ನು ಗೌರವದಿಂದ ನಡೆಸಿಕೊಳ್ಳಬೇಕಾದ ಸರಕಾರ, ದರ್ಪದ ಆದೇಶಗಳನ್ನು ಜಾರಿ ಮಾಡಿ,ಶಾಪಕ್ಕೆ ಗುರಿಯಾಗುತ್ತಿದೆ. 'ಹರ ಮುನಿದರೂ ಗುರು ಕಾಯ್ವನು' ಎಂಬುದನ್ನು ಸರಕಾರ ಮರೆಯಬಾರದು.
ರಾಜ್ಯ ಸರ್ಕಾರ ಅಕ್ಟೋಬರ್ 1ರಂದು ಮಧ್ಯಂತರ ರಜಾ ರದ್ದುಪಡಿಸಿ ಹೊರಡಿಸಿರುವ ಆದೇಶವನ್ನು ಕೂಡಲೇ ವಾಪಸ್ ಪಡೆದು ಶಿಕ್ಷಕರಿಗೆ ಮಧ್ಯಂತರ ರಜೆ ಘೋಷಿಸಬೇಕು.
5/5— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 11, 2020