ಬೆಂಗಳೂರು: ಕೊರೋನಾ ಹಾವಳಿ ನಡುವೆ ಶಾಲೆಗಳ ಆರಂಭಕ್ಕೆ ಸರ್ಕಾರ ಸಿದ್ಧತೆ ನಡೆಸುತ್ತಿರುವ ಬಗ್ಗೆ ವ್ಯಾಪಕ ಆಕ್ಷೇಪ ವ್ಯಕ್ತವಾಗುತ್ತಿವೆ. ರಾಜ್ಯ ಸರ್ಕಾರದ ನಡೆ ಬಗ್ಗೆ ಪ್ರತಿ ಪಕ್ಷಗಳು ಕೂಡಾ ಅಸಮಾಧಾನ ಹೊರ ಹಾಕಿವೆ.
ಈ ಕುರಿತಂತೆ ಕೊಪ್ಪಳದಲ್ಲಿ ಪ್ರತಿಕ್ರಿಯಿಸಿರುವ ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಇನ್ನೂ ಎರಡು ತಿಂಗಳು ಶಾಲೆಗಳನ್ನು ಆರಂಭಿಸುವುದು ಬೇಡ ಎಂದು ರಾಜ್ಯ ಸರ್ಕಾರಕ್ಕೆ ಸಲಹೆ ಮಾಡಿದ್ದಾರೆ.
ಮಕ್ಕಳಿಂದ ಕೊರೋನಾ ಹರಡತ್ತಿದೆ. ಶಾಲೆ ಆರಂಭಿಸಲು ಶಿಕ್ಷಣ ಸಚಿವರು ಆಸಕ್ತಿ ತೋರುತ್ತಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇನ್ನೂ ಎರಡು ತಿಂಗಳು ಶಾಲೆಗಳನ್ನು ಆರಂಭಿಸಬಾರದು. ಬಳಿಕ ಪೂರ್ವಸಿದ್ಧತೆ ಮಾಡಿಕೊಂಡು, ಮಕ್ಕಳಿಗೆಮಾಸ್ಕ್, ಸ್ಯಾನಿಟೈಸರ್ ವ್ಯವಸ್ಥೆ ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ವ್ಯವಸ್ಥೆಯಾಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.