ಖಾಸಗಿ ಶಾಲೆಗಳಿಂದ ಆನ್ ಲೈನ್ ಕ್ಲಾಸ್ ಬಂದ್?

ಬೆಂಗಳೂರು: ಆನ್ಲೈನ್ ಕ್ಲಾಸ್ ವಿರುದ್ಧ ರುಪ್ಸಾ ಧ್ವನಿ ಎತ್ತಿದೆ. ಈ ವಿಚಾರದಲ್ಲಿ ಶಿಕ್ಷಣ ಇಲಾಖೆ ವಿರುದ್ಧ ಹೋರಾಟಕ್ಕೆ ಖಾಸಗಿ ಶಿಕ್ಷಣ ಆಡಳಿತ ಮಂಡಳಿ, ರುಪ್ಸಾ ಮುಂದಾಗಿದೆ. ಆನ್ ಲೈನ್ ಕ್ಲಾಸ್ ಬಂದ್ ಮಾಡಲು ಮುಂದಾಗಿದೆ ಎನ್ನಲಾಗಿದೆ.

ಸರ್ಕಾರ ಶಾಲೆಗಳನ್ನ ಪುನಾರಂಭಿಸುವ ಸಮಯದಲ್ಲಿ ಶಾಲೆಗಳನ್ನ ಮುಚ್ಚಲು ಖಾಸಗಿ ಶಿಕ್ಷಣ ಆಡಳಿತ ಮಂಡಳಿ ಮುಂದಾಗಿರುವುದು ಅಚ್ಚರಿಗೆ ಕಾರಣವಾಗಿದೆ. ಶಿಕ್ಷಣ ಮಂಡಳಿಯ ನಿರ್ಧಾರದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಖಾಸಗಿ ಶಿಕ್ಷಣ ಆಡಳಿತ ಮಂಡಳಿಯು ಶಾಲೆಯನ್ನ ಮುಚ್ಚಿ ಆನ್ ಲೈನ್ ಕ್ಲಾಸ್ ಬಂದ್ ಮಾಡುವ ಬಗ್ಗೆ ಚರ್ಚೆ ನಡೆದಿದೆ.

ಈ ಕುರಿತು ಬೆಂಗಳೂರಿನ ಖಾಸಗಿ ಹೋಟೆಲ್’ನಲ್ಲಿ ಭಾನುವಾರ ರುಪ್ಸಾ, ಖಾಸಗಿ ಶಾಲೆಗಳ ಒಕ್ಕೂಟದ ಪ್ರತಿನಿಧಿಗಳ ಸಭೆ ಕುತೂಹಲದ ಕೇಂದ್ರಬಿಂದುವಾಯಿತು. ಜನವರಿ 6ರಿಂದ ಬೆಂಗಳೂರಿನಲ್ಲಿ ಹೋರಾಟಕ್ಕಿಳಿಯುವ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗುತ್ತಿದ್ದು, ಅಂದಿನಿಂದ ರಾಜ್ಯದಾದ್ಯಂತ ಶಾಲೆ ಬಂದ್ ಮಾಡುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.

Related posts