ದೆಹಲಿ: ಮಾರಣಾಂತಿಕ ಕೊರೋನಾ ಸೋಂಕು ಇಡೀ ದೇಶವನ್ನು ಆವರಿಸಿರುವ ಹಿನ್ನೆಲೆಯಲ್ಲಿ ಶಾಲಾ ಕಾಲೇಜು ಆರಂಭ ಸಧ್ಯಕ್ಕಿಲ್ಲ ಎಂಬ ಸುಳಿವನ್ನು ಕೇಂದ್ರ ಸರ್ಕಾರ ನೀಡಿದೆ.
ಕೋವಿಡ್ 19 ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಬಹುತೇಕ ರಾಜ್ಯಗಳು ಶಾಲೆಗಳ ಪುನರಾರಂಭಕ್ಕೆ ಒಲವು ವ್ಯಕ್ತಪಡಿಸಿಲ್ಲ. ಈ ಕಾರಣದಿಂದಾಗಿ ಶಾಲೆಗಳ ಆರಂಭಕ್ಕೆ ಇನ್ನೂ ದಿನಾಂಕ ನಿಗದಿಪಡಿಸಿಲ್ಲ ಎಂದು ಕೇಂದ್ರ ಶಿಕ್ಷಣ ಸಚಿವಾಲಯ ಹೇಳಿದೆ.
ಸೆಪ್ಟೆಂಬರ್ ಅಥವಾ ಅಕ್ಟೋಬರ್ ತಿಂಗಳಲ್ಲಿ ಪ್ರೌಢಶಾಲಾ ಶಿಕ್ಷಣದ ನಂತರದ ಶಾಲೆಗಳನ್ನು ಆರಂಭಿಸುವ ಸಾಧ್ಯತೆ ಬಗ್ಗೆ ಚಿಂತನೆ ನಡೆದಿತ್ತಾದರೂ ಸದ್ಯದ ಪರಿಸ್ಥಿತಿ ಹಿನ್ನೆಲೆಯಲ್ಲಿ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಪರಿಸ್ಥಿತಿ ನೋಡಿಕೊಂಡು ಮುಂದೆ ತೀರ್ಮಾನಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.