ಹಾವೇರಿ: ಮುಂಗಾರು ಹಂಗಾಮು ಸಂಬಂಧ ರೈತರ ಕೃಷಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳಲು ಕೃಷಿ ಇಲಾಖೆ ಸಿದ್ಧವಾಗಿದೆ.
2020-21 ನೇ ಸಾಲಿನ ಮುಂಗಾರು ಹಂಗಾಮಿಗೆ ರೈತರಿಗೆ ಅಗತ್ಯವಾದ ಬಿತ್ತನೆ ಬೀಜವನ್ನು ರಿಯಾಯಿತಿ ದರದಲ್ಲಿ ನೀಡಲು ಸರ್ಕಾರ ಪ್ರಕ್ರಿಯೆ ಆರಂಭಿಸಿದ್ದು, ಮೆಕ್ಕೆಜೋಳವನ್ನು ಸಾಮಾನ್ಯ ವರ್ಗದವರಿಗೆ 20 ರೂಪಾಯಿ ಹಾಗೂ ಪರಿಶಿಷ್ಟ ಜಾತಿ, ವರ್ಗದ ರೈತರಿಗೆ 30 ರೂಪಾಯಿ ರಿಯಾಯಿತಿ ದರದಲ್ಲಿ ವಿತರಣೆಗೆ ಕ್ರಮ ಕೈಗೊಂಡಿದೆ.
ಇದನ್ನೂ ಓದಿ.. ನಾಳೆಯಿಂದ ಭಾರೀ ವರ್ಷಧಾರೆ; ಮೇ 15,16 ರಂದು ಬಿರುಗಾಳಿ ಮಳೆ ಆತಂಕ
ಕೃಷಿ ಇಲಾಖೆಯ ಈ ಕಾರ್ಯಕ್ರಮಕ್ಕೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಮಂಗಳವಾರ ತಮ್ಮ ಮತಕ್ಷೇತ್ರ ಹಿರೇಕೆರೂರಿನಲ್ಲಿ ಸಾಂಕೇತಿಕವಾಗಿ ಚಾಲನೆ ನೀಡಿದರು. ಒಂದಷ್ಟು ರೈತರಿಗೆ ಮುಸುಕಿನ ಜೋಳ ಬಿತ್ತನೆ ಬೀಜವನ್ನು ರಿಯಾಯಿತಿ ದರದಲ್ಲಿ ವಿತರಿಸಲಾಯಿತು.
ಈ ವೇಳೆ ಮಾತನಾಡಿದ ಸಚಿವ ಬಿ.ಸಿ.ಪಾಟೀಲ್, ಕಳಪೆ ಬಿತ್ತನೆ ಬೀಜ ಮಾರಾಟ ಜಾಲವನ್ನು ಬೇಧಿಸಲಾಗಿದ್ದು, ಅಧಿಕಾರಿಗಳು ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ರೈತರ ಬಿತ್ತನೆಗೆ ಅಗತ್ಯವಾದ ರಸಗೊಬ್ಬರ ಹಾಗೂ ಬಿತ್ತನೆಬೀಜಕ್ಕೆ ಯಾವುದೇ ಕೊರತೆಯಾಗದಂತೆ ಕ್ರಮಕೈಗೊಳ್ಳಲಾಗಿದೆ ಎಂದರು.
ಇದನ್ನೂ ಓದಿ.. ಖಡಕ್ ಅಧಿಕಾರಿ ವರ್ಗಾವಣೆ; ಒತ್ತಡಕ್ಕೆ ಮಣಿಯಿತೇ ಸರ್ಕಾರ?
ಜಂಟಿ ಕೃಷಿ ನಿರ್ದೇಶಕ ಮಂಜುನಾಥ್ ಮಾತನಾಡಿ, ಸಚಿವರ ನಿರ್ದೇಶನದಂತೆ ಕಳಪೆ ನಕಲಿ ಬಿತ್ತನೆಬೀಜ ಮಾರಾಟಗಾರರನ್ನು ನಾಶ ಮಾಡುವಲ್ಲಿ ಇಲಾಖೆ ಕಾರ್ಯಪ್ರವೃತ್ತವಾಗಿದ್ದು, ಹಿಂದಿನಂತೆಯೇ ನಕಲಿತನವನ್ನು ಬೇಧಿಸುವ ಕೆಲಸ ಮುಂದುವರೆದಿದೆ ಎಂದರು.
ಮುಂಗಾರಿಗೆ ಒಟ್ಟು ಶೇ.82 ರಷ್ಟು ಸಾಗುವಳಿ ಕ್ಷೇತ್ರದಲ್ಲಿ ಬಿತ್ತನೆಯಾಗಲಿದೆ. ಒಟ್ಟು ಮುಂಗಾರಿಗೆ 55,648 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿಯಿದೆ. ಇದರಲ್ಲಿ 65,660 ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೆಜೋಳ ಬಿತ್ತನೆ ಗುರಿಯಿದೆ. ಭತ್ತ 1768 ಹೆಕ್ಟೇರ್ ಹತ್ತಿ 7059 ಹೆಕ್ಟೇರ್ ಬಿತ್ತನೆ ಗುರಿಯಿದೆ ಎಂದರು.
ಇದನ್ನೂ ಓದಿ ರಾಜ್ಯದ ಖಜಾನೆಗೆ ಹಣದ ಹೊಳೆ; ಮದ್ಯ ಮಾರಾಟದಿಂದ ಬಂದ ಆದಾಯ ಎಷ್ಟು ಗೊತ್ತಾ?