ಕಲಬುರಗಿ: 2023-24 ನೇ ಸಾಲಿನ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಸೇಡಂ ತಾಲೂಕಿನ ರಾಜ್ಯ ಹೆದ್ದಾರಿ-10 ರಿಂದ ಮುಧೋಳ-ಯಲಗೇರಾ (ರಾಷ್ಟ್ರೀಯ ಹೆದ್ದಾರಿ-127) ಕಿ.ಮಿ.9 ರಿಂದ 24.53 ರವರೆಗೆ ಹಾಗೂ ಮದನಾ ಗ್ರಾಮದ ಆಯ್ದ ಭಾಗಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ಸಿಕ್ಕಿದೆ. ಅಂದಾಜು 25 ಕೋಟಿ ರೂಪಾಯಿ ವೆಚ್ಚದ ಈ ಕಾಮಗಾರಿಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಜೀವನೋಪಾಯ, ಉದ್ಯಮಶೀಲತೆ ಸಚಿವ ಡಾ.ಶರಣಪ್ರಕಾಶ ಪಾಟೀಲರು ಶಿಲಾನ್ಯಾಸ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಡಾ.ಶರಣಪ್ರಕಾಶ ಪಾಟೀಲ್, ಸೇಡಂ ತಾಲೂಕಿನ ಗ್ರಾಮೀಣ ಭಾಗದ ರಸ್ತೆ ಸುಧಾರಣೆ ಹಾಗೂ ರಾಜ್ಯ-ರಾಷ್ಟ್ರೀಯ ಹೆದ್ದಾರಿ ಕಲ್ಪಿಸುವ ಸೇಡಂ ತಾಲೂಕಿನ ವಿವಿಧ ಗ್ರಾಮಗಳ ರಸ್ತೆ ಬಗ್ಗೆ ಹೆಚ್ಚಿನ ಒತ್ತು ನೀಡಿ ವಿಶೇಷ ಅನುದಾನ ಮುಖಾಂತರ ಸುಧಾರಣೆಗೊಳಿಸಲಾಗುತ್ತಿದೆ ಎಂದರು.
ಕಲಬುರಗಿ ಸಂಸದರಾದ ಶ್ರೀ ರಾಧಾಕೃಷ್ಣ ದೊಡ್ಡಮನಿ ಅವರು ಹಾಗೂ ಸೇಡಂ-ಮುಧೋಳ ಬ್ಲಾಕ್ ಕಾಂಗ್ರೆಸ್ ಮುಖಂಡರು, ಹಿರಿಯ ನಾಯಕರು ಉಪಸ್ಥಿತರಿದ್ದರು.