ಬಿಡದಿ: ಕರೋನಾ ಪಿಡುಗಿನಿಂದ ಕಾರ್ಮಿಕರ ರಕ್ಷಣೆಗೆ ಹೆಚ್ಚಿನ ಒತ್ತು ನೀಡುವಂತೆ ಕಂಪೆನಿಗಳಿಗೆ ಬೃಹತ್ ಮತ್ತು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಸೂಚಿಸಿದ್ದಾರೆ.
ಬಿಡದಿಯ ಕೋಕೊ ಕೋಲಾ ಫ್ಯಾಕ್ಟರಿಗೆ ಭೇಟಿ ನೀಡಿದ ಜಗದೀಶ ಶೆಟ್ಟರ್, ಕೋಕೊ ಕೋಲಾ ಫ್ಯಾಕ್ಟರಿಯಲ್ಲಿ ಅಳವಡಿಸಿಕೊಂಡಿರುವ ಸುರಕ್ಷತೆಯ ಕ್ರಮಗಳನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕರೋನಾ ಸಾಂಕ್ರಾಮಿಕ ರೋಗ ಎಲ್ಲಾ ಕ್ಷೇತ್ರ ಹಾಗೂ ಜನರನ್ನು ಸಂಕಷ್ಟಕ್ಕೀಡು ಮಾಡಿದೆ. ದೇಶ ಹಾಗೂ ರಾಜ್ಯದ ಆರ್ಥಿಕತೆಯ ಗಾಲಿ ಮುಂದೆ ಸಾಗಲು ಕೈಗಾರಿಕಾ ಕ್ಷೇತ್ರದ ತನ್ನ ಕಾರ್ಯ ಆರಂಭ ಮಾಡಬೇಕಾಗಿರುವುದು ಅನಿವಾರ್ಯ. ಇದನ್ನು ಮನಗೊಂಡು ರಾಜ್ಯ ಸರಕಾರ ಹಾಗೂ ಕೇಂದ್ರ ಸರಕಾರ ಲಾಕ್ ಡೌನ್ ಸಡಲಿಕೆ ಮಾಡಿದೆ. ಆದರೆ, ಕರೋನಾ ಮಹಾಮಾರಿಯ ತೊಂದರೆ ಇನ್ನು ತಪ್ಪಿಲ್ಲ. ಕರೋನಾ ಜೊತೆಯಲ್ಲಿಯೇ ಬದುಕಲು ನಾವು ಕಲಿತುಕೊಳ್ಳಬೇಕಾಗಿದೆ. ಸಾಮಾಜಿಕ ಅಂತರ, ಮಾಸ್ಕ್ ಹಾಗೂ ಸ್ಯಾನಿಟೈಸರ್ ಬಳಕೆಯನ್ನು ನಮ್ಮ ಬದುಕಿನ ಕರ್ತವ್ಯಗಳಾಗಿ ಸ್ವೀಕರಿಸಬೇಕು ಎಂದು ಹೇಳಿದರು.