ಶಿರಸಿ ಮಾರಿಕಾಂಬಾ ದೇಗುಲ ಪುನರ್ ನಿರ್ಮಾಣ ಪ್ರಕ್ರಿಯೆ ಆರಂಭ

ಶಿರಸಿ: ರಾಜ್ಯದ ಪುರಾಣ ಪ್ರಸಿದ್ಧ ದೇಗುಲಗಳಲ್ಲೊಂದಾದ ಶಿರಸಿಯ ಮಾರಿಕಾಂಬಾ ದೇವಸ್ಥಾನದ ಪುನರ್ ನಿರ್ಮಾಣ ಪ್ರಕ್ರಿಯೆ ಆರಂಭಗೊಂಡಿದೆ. ಮುಂದಿನ‌ ಅಭಿವೃದ್ದಿ ಕಾಮಗಾರಿಗಳ ವಿಸ್ತೃತ ಯೋಜನಾ ವರದಿಯನ್ನು ಬಿಡುಗಡೆ ಮಾಡಲಾಗಿದೆ.

ಸುಮಾರು 200 ಕೋಟಿ ರೂಪಾಯಿ ವೆಚ್ಚದಲ್ಲಿ ಯೋಜನೆಯನ್ನು ರೂಪಿಸಲಾಗಿದ್ದು, ಈ ಸಂಬಂಧ ಮಾರಿಕಾಂಬಾ ದೇವಿಯ ಜಾತ್ರಾ ಗದ್ದುಗೆಯಲ್ಲಿ ಗುರುವಾರ ಬಿಡುಗಡೆ ಮಾಡಲಾದ ನೀಲ ನಕ್ಷೆ ಗಮನಸೆಳೆದಿದೆ. ಸುಮಾರು 200 ಕೋಟಿ ರೂಪಾಯಿ ವೆಚ್ಚದಲ್ಲಿ ಹದಿಮೂರು ವಿಭಾಗದ ಅಭಿವೃದ್ದಿ ಕಾರ್ಯಗಳಿಗೆ ಯೋಜನೆ ರೂಪಿಸಲಾಗಿದೆ ಎಂದು ದೇವಸ್ಥಾನದ ಮುಖ್ಯಸ್ಥರು ತಿಳಿಸಿದ್ದಾರೆ.

ಸಹಾಯಕ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ, ಶಿರಸಿಯ ಮಾರಿಕಾಂಬಾ ದೇವಸ್ಥಾನದ ಧರ್ಮದರ್ಶಿ ಮಂಡಳಿ ಅಧ್ಯಕ್ಷ ವೆಂಕಟೇಶ ನಾಯ್ಕ‌, ಉಪಾಧ್ಯಕ್ಷ ಮನೋಹರ‌ ಮಲ್ಮನೆ ಮೊದಲಾದವರ ಉಪಸ್ಥಿತಿಯಲ್ಲಿ ಜಿಲ್ಲಾ ಸತ್ರ ನ್ಯಾಯಾಧೀಶರಾದ ಶಾಂತವೀರ ಶಿವಪ್ಪ, ಸುನೀತಾ ಅವರು ಈ ನೀಲ ನಕ್ಷೆಯನ್ನು, ಬಿಡುಗಡೆಗೊಳಿಸಿದರು.

Related posts