ನವದೆಹಲಿ: ಶಿರೋಮಣಿ ಅಕಾಲಿದಳ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟಕ್ಕೆ (ಎನ್ಡಿಎ) ಸೇರ್ಪಡೆಗೊಂಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಅಕಾಲಿದಳದ ಸೇರ್ಪಡೆಯನ್ನು ಸಹಜ ಮೈತ್ರಿ ಎಂದು ಬಣ್ಣಿಸಿದ್ದಾರೆ. ಈ ಮೈತ್ರಿಯಿಂದ ಪಂಜಾಬ್ನಲ್ಲಿ ಜನಪರ ಆಡಳಿತ ನೀಡಲು ಹಾಗೂ ರಾಜ್ಯವನ್ನು ಅಭಿವೃದ್ಧಿಯ ಹೊಸ ಎತ್ತರಕ್ಕೆ ಕೊಂಡೊಯ್ಯಲು ಸಾಧ್ಯವಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅಟಲ್ ಬಿಹಾರಿ ವಾಜಪೇಯಿ, ಎಲ್.ಕೆ. ಅಡ್ವಾಣಿ ಮತ್ತು ಪ್ರಕಾಶ್ ಸಿಂಗ್ ಬಾದಲ್ ಅವರಿಂದ ಪೋಷಿಸಲ್ಪಟ್ಟ ಅಕಾಲಿದಳ-ಬಿಜೆಪಿ ಮೈತ್ರಿ ಕಾಲದ ಪರೀಕ್ಷೆಯಲ್ಲಿ ಯಶಸ್ವಿಯಾಗಿದೆ ಎಂದು ಮೋದಿ ಹೇಳಿದ್ದಾರೆ.
ಮುಂಬರುವ ದಿನಗಳಲ್ಲಿ ಈ ಮೈತ್ರಿ ಪಂಜಾಬ್ ಜನರ ಆದ್ಯತೆಯ ಆಯ್ಕೆಯಾಗಿ ಹೊರಹೊಮ್ಮಲಿದೆ ಎಂಬ ವಿಶ್ವಾಸವನ್ನೂ ಅವರು ವ್ಯಕ್ತಪಡಿಸಿದ್ದಾರೆ.

