ತೀರ್ಥಹಳ್ಳಿ ಬಳಿ ಭೀಕರ ಘಟನೆ; ಒಂದೇ ಕುಟುಂಬದ ಮೂವರು ಸಜೀವ ದಹನ

ಶಿವಮೊಗ್ಗ: ಮಲೆನಾಡಿನಲ್ಲಿ ನಡೆದ ಸಾವಿನ ಘಟನೆ ಜನರನ್ನು ಬೆಚ್ಚಿ ಬೀಳಿಸಿದೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಅರಳಸುರಳಿ ಸಮೀಪದ ಕೆಕೋಡ್ ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ಒಂದೇ ಕುಟುಂಬದ ಮೂವರು ಶವವಾಗಿ ಪತ್ತೆಯಾಗಿದ್ದಾರೆ.

ಸುಟ್ಟು ಕರಕಲಾದ ಸ್ಥಿತಿಯಲ್ಲಿ ಶವಗಳು ಪತ್ತೆಯಾಗಿವೆ. ಮನೆಯ ಕೋಣೆಯಲ್ಲಿ ಕಟ್ಟಿಗೆ ಇತ್ತು ಬೆಂಕಿ ಹಚ್ಚಿರುವ ರೀತಿ ಕುರುಹು ಪತ್ತೆಯಾಗಿದ್ದು, ಆತ್ಮಹತ್ಯೆಯ ಬಗ್ಗೆ ಅನುಮಾನ ವ್ಯಕ್ತವಾಗಿದೆ.

ಅರ್ಚಕರಾಗಿ ಕೆಲಸ ಮಾಡುತ್ತಿದ್ದ 65 ವರ್ಷ ಹರೆಯದ ರಾಘವೇಂದ್ರ ಕೆಕೋಡ್, ಅವರ ಪತ್ನಿ 55 ವರ್ಷದ ನಾಗರತ್ನ, ಪುತ್ರ 30 ವರ್ಷದ ಶ್ರೀರಾಮ್ ಸಾವಿಗೀಡಾಗಿದ್ದಾರೆ. ಮತ್ತೊಬ್ಬ ಪುತ್ರ 28 ವರ್ಷದ ಭರತ್ ಗಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಭೀತಿ ನೀಡಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Related posts