ಕುಸಿದ ಥಿಯೇಟರ್; ಹತ್ತಕ್ಕೂ ಹೆಚ್ಚು ವಾಹನಗಳಿಗೆ ಹಾನಿ

ಶಿವಮೊಗ್ಗ: ತೀರ್ಥಹಳ್ಳಿಯಲ್ಲಿ ಸಿನಿಮಾ ಮಂದಿರ ಕುಸಿದ ಪರಿಣಾಮ ಹತ್ತಕ್ಕೂ ಹೆಚ್ಚು ವಾಹನಗಳು ಹಾನಿಗೊಳಗಾಗಿವೆ. ‘ಜೈಲರ್’ ಸಿನಿಮಾ ಪ್ರದರ್ಶನದ ವೇಳೆ ಘಟನೆ ನಡೆದಿದೆ.

ತೀರ್ಥಹಳ್ಳಿಯ ವಿನಾಯಕ ಥಿಯೇಟರ್ ಕಟ್ಟಡದ ಮುಂಭಾಗವು ಕುಸಿದಿದೆ. ರಜನಿಕಾಂತ್ ನಟನೆಯ ‘ಜೈಲರ್’ ಸಿನಿಮಾ ಪ್ರದರ್ಶನದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದು ಆ ವೇಳೆ 20ಕ್ಕೂ ಹೆಚ್ಚು ಜನ ಚಿತ್ರಮಂದಿರದಲ್ಲಿ ಇದ್ದರು. ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ.

Related posts