ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಸಂದೇಶ; ಪೊಲೀಸರಿಗೆ ಕೆಪಿಸಿಸಿ ದೂರು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಜಲ ತಾಣದಲ್ಲಿ ಅವಹೇಳನಕಾರಿ ಸಂದೇಶ ಹಾಕಿರುವ ಪ್ರಕರಣದ ವಿರುದ್ಧ ಕೆಪಿಸಿಸಿ ಕಾನೂನು ಸಮರಕ್ಕೆ ಮುನ್ನುಡಿ ಬರೆದಿದೆ. ಸಂದೇಶ ಹಾಕಿರುವ ಕಿಡಿಗೇಡಿಗಳ ವಿರುದ್ಧ ಕೆಪಿಸಿಸಿ ಕಾನೂನು ಘಟಕದಿಂದ ಬೆಂಗಳೂರು ನಗರ ಪೊಲೀಸರಿಗೆ ದೂರು ನೀಡಿದೆ.

ವಕೀಲ ಸೂರ್ಯ ಮುಕುಂದರಾಜ್ ಮೂಲಕ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿರುವ ಕಾಂಗ್ರೆಸ್ ನಾಯಕರು, ಆರೋಪಿಗಳ ವಿರುದ್ಧ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

 

 

Related posts