ರಾಜಕೀಯ ಗುರುವಿನ ಅಚಾನಕ್ ಭೇಟಿ.. ಸಿಎಂ ಹೇಳಿದ್ದು ಹೀಗೆ

ಬೆಂಗಳೂರು: ಒಂದೆಡೆ ಆಡಳಿತಾರೂಢ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ರಾಜಕೀಯ ಸಮಾರಾ ನಡೆಯುತ್ತಿದ್ದರೆ ಮತ್ತೊಂದೆಡೆ ಹಿರಿಯ ನಾಯಕರಿಗೆ ಅಚ್ಚರಿಯ ಸನ್ನಿವೇಶಗಳು ಎದುರಾಗುತ್ತಿವೆ. ಕಾಂಗ್ರೆಸ್ ಪಕ್ಷಕ್ಕೆ ಸವಾಲೊಡ್ಡುವ ರೀತಿ ಬಿಜೆಪಿ- ಜೆಡಿಎಸ್​ ಮೈತ್ರಿ ಬೆಳವಣಿಗೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಮಾಜಿ ಪ್ರಧಾನಿ ಎಚ್​.ಡಿ ದೇವೇಗೌಡರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಿರೀಕ್ಷಿತವಾಗಿ ಭೇಟಿಯಾಗಿ ಅಚ್ಚರಿಗೆ ಕಾರಣರಾದರು.

ಭಾನುವಾರ ಕಾಂಗ್ರೆಸ್​ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳುತ್ತಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಎದುರಾದರು. ಪತ್ನಿ ಜೊತೆ ಮಂಗಳೂರಿಗೆ ತೆರಳುತ್ತಿದ್ದ ಮಾಜಿ ಪ್ರಧಾನಿ ದೇವೇಗೌಡರನ್ನು ಕಂಡ ಸಿಎಂ ಸಿದ್ದರಾಮಯ್ಯ ತನ್ನ ರಾಜಕೀಯ ಗುರುವಿನತ್ತ ತೆರಳಿ ಮಾತನಾಡಿದರು. ಕೆಲಹೊತ್ತು ಜೊತೆಗಿದ್ದ ಈ ನಾಯಕರು ಕುಶಲೋಪರಿ ಮಾತನಾಡುತ್ತಾ ಗಮನಸೆಳೆದರು.

ಈ ಕುರಿತಂತೆ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ತಾವು ದೇವೇಗೌಡರು ಮತ್ತು ಚನ್ನಮ್ಮ ಅವರ ಆರೋಗ್ಯ ವಿಚಾರಿಸಿದ್ದಾಗಿ ಹೇಳಿಕೊಂಡಿದ್ದಾರೆ.

Related posts