ಕಾರು ಪಲ್ಟಿಯಾಗಿ ಆರು ಮಂದಿ ಸಾವು; ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ಅಪಘಾತ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ಬಳಿ ಭೀಕರ ಅಪಘಾತ ಸಂಭವಿಸಿದೆ. ಇನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವನ್ನಪಿದರೆ, ಮತ್ತಿಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಯಲಹಂಕ- ಹಿಂದೂಪುರ ಹೆದ್ದಾರಿಯ ಮಾಕಳಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದ ರಭಸಕ್ಕೆ ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿತ್ತು. ಮೃತರನ್ನು ದೊಡ್ಡಬಳ್ಳಾಪುರ ನಗರದ ಕರೇನಹಳ್ಳಿ ನಿವಾಸಿಗಳಾದ ಈಶ್ವರಪ್ಪ (75), ಪುರುಷೋತ್ತಮ (75), ಕಾಳಪ್ಪ(68), ನಾರಾಯಣಪ್ಪ(70),ಗೋಪಿನಾಥ್ (45) ಸೇರಿದಂತೆ ಚಾಲಕ ನರಸಿಂಹಮೂರ್ತಿ(50) ಎಂದು ಗುರುತಿಸಲಾಗಿದೆ.

ಸುದ್ದಿತಿಳಿದು ಸ್ಥಳಕ್ಕೆ ಧಾವಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Related posts