ಎಸ್.ಎಂ. ಕೃಷ್ಣ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. 92 ವರ್ಷದ ಎಸ್.ಎಂ. ಕೃಷ್ಣ ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದು ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಈ ಹಿಂದೆ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಮತ್ತೆ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದೆ. ಆಸ್ಪತ್ರೆಗೆ ದಾಖಲಾಗಿರುವ ಎಸ್.ಎಂ. ಕೃಷ್ಣ ಅವರನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿಯಾಗಿ ಅರೋಗ್ಯ ವಿಚಾರಿಸಿದ್ದಾರೆ.

Related posts