ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗೊಂದಲ.. ಏರ್ ಇಂಡಿಯಾ ವಿಮಾನದಲ್ಲಿ ಕಾಣಿಸಿಕೊಂಡ ಹೊಗೆ.. ಕೆಐಎ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಜನರಲ್ಲಿ ಆತಂಕ..
ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಕೆಐಎ) ಬಂದಿಳಿದ ಏರ್ ಇಂಡಿಯಾ ವಿಮಾನದಲ್ಲಿ ಹೊಗೆ ಹೊರಹೊಮ್ಮುತ್ತಿರುವ ಆಘಾತಕಾರಿ ಘಟನೆಯಿಂದ ನಿಲ್ದಾಣದಲ್ಲಿ ಆತಂಕ ಸೃಷ್ಟಿಯಾಯಿತು.
ವಿಮಾನದ ಹಿಂಭಾಗದಿಂದ ಹೊಗೆ ಹೊರಹೊಮ್ಮುತ್ತಿತ್ತು. ವಿಮಾನದಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ವಿಮಾನ ನಿಲ್ದಾಣದ ಸಿಬ್ಬಂದಿ ಹೈ ಅಲರ್ಟ್ ಘೋಷಿಸಿದರು. ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು.
ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ T2 ನಲ್ಲಿ ಏರ್ ಇಂಡಿಯಾ ವಿಮಾನ ಲ್ಯಾಂಡ್ ಆದ ನಂತರ ಈ ಘಟನೆ ಸಂಭವಿಸಿದೆ. ವರದಿಗಳ ಪ್ರಕಾರ, ಘಟನೆ ಸುಮಾರು ರಾತ್ರಿ 8.40ಕ್ಕೆ ಬೆಳಕಿಗೆ ಬಂದಿದೆ. ಏರ್ ಇಂಡಿಯಾದ ಏರ್‌ಬಸ್ A320 ವಿಮಾನವನ್ನು ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ 2 ರ ಗೇಟ್ 10 ರ ಏರೋಬ್ರಿಡ್ಜ್‌ಗೆ ಸಂಪರ್ಕಿಸುತ್ತಿದ್ದ ನಂತರ ಈ ಘಟನೆ ನಡೆದಿದೆ.
ಬೆಂಗಳೂರು ವಿಮಾನ ನಿಲ್ದಾಣದ ಟಿ2ಗೆ ಬಂದಿಳಿದ ಏರ್ ಇಂಡಿಯಾ ವಿಮಾನದ ಬಾಲದ ಬಳಿ ಇರುವ ಆಕ್ಸಿಲರಿ ಪವರ್ ಯೂನಿಟ್ ನಿಂದ ಭಾರೀ ಹೊಗೆ ಹೊರಹೊಮ್ಮುತ್ತಿದೆ. ವಿಮಾನದಿಂದ ಹೊಗೆ ಕಾಣಿಸಿಕೊಂಡ ನಂತರ ವಿಮಾನ ನಿಲ್ದಾಣದಲ್ಲಿದ್ದ ಇತರ ವಿಮಾನಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು. ವಿಮಾನ ನಿಲ್ದಾಣದಲ್ಲಿ ಬೆಂಕಿ ಹರಡುವುದನ್ನು ತಪ್ಪಿಸಲು ವಿಮಾನ ನಿಲ್ದಾಣದ ಅಧಿಕಾರಿಗಳು ಇತರ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡರು.