ಸೋನಿಯಾ ಗಾಂಧಿ Vs ಶೋಭಾ ಕರಾಂದ್ಲಾಜೆ; FIR ರದ್ದು ಮಾಡದಂತೆ ಸಲಹೆ

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಅವಹೇಳನಕಾರಿ ಮಾಡಿ ಟ್ವೀಟ್ ಮಾಡಿದ ಆರೋಪಕ್ಕೆ ಗುರಿಯಾಗಿರುವ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ವಿರುದ್ಧ ಬಿಜೆಪಿಯ ಫಯರ್ ಬ್ರಾಂಡ್ ನಾಯಕಿ ಶೋಭಾ ಕರಂದ್ಲಾಜೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾವುದೇ ಒತ್ತಡಕ್ಕೂ ಮಣಿಯಬೇಡಿ, ಸೋನಿಯಾ ವಿರುದ್ದದ ಎಎಫ್ಐಆರ್ ರದ್ದು ಮಾಡಬೇಡಿ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ರಾಜ್ಯ ಸರ್ಕಾರಕ್ಕೆ ಸಲಹೆ ಮಾಡಿದ್ದಾರೆ.

ಕಾಂಗ್ರೆಸ್ ಪಕ್ಷದ ಟ್ವಿಟರ್ ಖಾತೆಯಲ್ಲಿ ಮೋದಿಯವರು ಪಿಎಂ ಕೇರ್ ಫಂಡ್ ದುರ್ಬಳಕೆ ಮಾಡಿಕೊಂಡಿದ್ದಾರೆಂದು ಪೋಸ್ಟ್ ಮಾಡಲಾಗಿದೆ ಎನ್ನಲಾಗಿದೆ. ಪಿಎಂ ಕೇರ್ ಫಂಡ್ ಫ್ರಾಡ್ ಎಂದು ಟ್ವಿಟರ್ ನಲ್ಲಿ ಟೀಕಿಸಲಾಗಿದೆ. ಈ ಮೂಲಕ ಪ್ರಧಾನಿ ಮೋದಿಯವರನ್ನು ಅವಹೇಳನ ಮಾಡಲಾಗಿದೆ ಎಂದು ವಕೀಲ ಪ್ರವೀಣ್ ಎಂಬುವವರು ಸೋನಿಯಾ ಗಾಂಧಿ ವಿರುದ್ಧ ದೂರು ನೀಡಿದ್ದು ಈ ದೂರಿನ ಹಿನ್ನೆಲೆಯಲ್ಲಿ ಎಎಫ್ಐಆರ್ ದಾಖಲಾಗಿದೆ.

ಇದನ್ನೂ ಓದಿ.. ಸಾಲಗಾರರ ನೆರವಿಗೆ ಧಾವಿಸಿದ RBI; ಆಗಸ್ಟ್’ವರೆಗೂ ಸಾಲ ಮರುಪಾವತಿಗೆ ವಿನಾಯಿತಿ 

ಈ ಪ್ರಕರಣವನ್ನು ಹಿಂಪಡೆಯಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಕೈ ನಾಯಕರು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿ ಪ್ರತಿಕ್ರಿಯಿಸಿರುವ ಸಂಸದೆ ಶೋಭಾ ಕರಂದ್ಲಾಜೆ, ಸೋನಿಯಾ ಗಾಂಧೀ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ್ದಾರೆ. ಅಷ್ಟೇ ಅಲ್ಲ ಯಾವುದೇ ಕಾರಣಕ್ಕೂ ಕೇಸ್ ವಾಪಸ್ ಪಡೆಯಬಾರದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ.. ಬರಡು ಭೂಮಿಗೆ ಜೀವಜಲ ಹರಿಸಿದ ‘ಭಗೀರಥ’; ಇಂದಿರಾ ಕ್ಯಾಂಟೀನ್ ಕ್ಯಾಪ್ಟನ್ ‘ಪೂಜಾರಿ’ಗೆ ಸೆಲ್ಯೂಟ್

 

Related posts