ರಾಜೀನಾಮೆ ನಿರ್ಧಾರದಿಂದ ಹಿಂದಕ್ಕೆ ಸರಿದ ಸಭಾಪತಿ ಹೊರಟ್ಟಿ

ಹುಬ್ಬಳ್ಳಿ: ರಾಜೀನಾಮೆ ನಿರ್ಧಾರದಿಂದ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹಿಂದಕ್ಕೆ ಸರಿದಿದ್ದಾರೆ.

ಪ್ರಸ್ತುತ ದಿನಗಳಲ್ಲಿ ಸದನದಲ್ಲಿ ಸಂಭಾಳಿಸಲು ಸಾಧ್ಯವಿಲ್ಲ ಎಂದು ಕೆಲವು ದಿನಗಳ ಹಿಂದೆ ಅಸಮಾಧಾನ ಹೊರಹಾಕಿದ್ದ​ ಮೇಲ್ಮನೆ ಸಭಾಪತಿ ಬಸವರಾಜ ಹೊರಟ್ಟಿ ರಾಜೀನಾಮೆಯ ಇಂಗಿತ ವ್ಯಕ್ತಪಡಿಸಿದ್ದರು. ಇದೀಗ ಆ ನಿರ್ಧಾರದಿಂದ ಹಿಂದೆ ಸರಿದಿರುವುದಾಗಿ ಹೊರಟ್ಟಿ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿರುವುದಾಗಿ ತಿಳಿಸಿದರು.

ತಮ್ಮ ರಾಜೀನಾಮೆ ಸುದ್ದಿ ಹರಿದಾಡಿದ ಬಳಿಕ ರಾಜ್ಯಪಾಲರು, ಸಚಿವರು ಹಾಗೂ ಸಾಹಿತಿಗಳು ಮಾತನಾಡಿದ್ದಾರೆ. ಮಾರ್ಚ್ 27ರಂದು ಕುಳಿತು ಮಾತನಾಡೋಣ ಎಂದಿದ್ದರು ಹಾಗಾಗಿ ರಾಜೀನಾಮೆ ನಿರ್ಧಾರವನ್ನು ಕೈ ಬಿಟ್ಟಿದ್ದೇನೆ ಎಂದು ಹೊರಟ್ಟಿ ತಿಳಿಸಿದರು.

Related posts