‘ಸ್ಪೀಕರ್ ಸ್ಥಾನವನ್ನು ಜಾತಿ ಧರ್ಮ ಬಿಟ್ಟು ನೋಡಬೇಕು, ನಾನು ಎಲ್ಲರ ಸ್ಪೀಕರ್’; ಜಮೀರ್ ಹೇಳಿಕೆಗೆ ಯು.ಟಿ.ಖಾದರ್ ಆಕ್ಷೇಪ

ಮಂಗಳೂರು: ರಾಜ್ಯ ರಾಜಕಾರಣದಲ್ಲಿ ವಿವಾದದ ಬಿರುಗಾಳಿ ಎಬ್ಬಿಸಿರುವ ಸಚಿವ ಜಮೀರ್ ಅಹ್ಮದ್ ಅವರ ಮುಸ್ಲಿಂ ಸ್ಪೀಕರ್ ಬಗೆಗಿನ ಹೇಳಿಕೆಗೆ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಪ್ರತಿಕ್ರಿಯೆ ನೀಡಿರುವ ಅವರು, ಸ್ಪೀಕರ್ ಸ್ಥಾನವನ್ನು ರಾಜಕೀಯ, ಜಾತಿ ಧರ್ಮದಿಂದ ನೋಡುವಂತಿಲ್ಲ. ನಾನು ಎಲ್ಲರ ಸ್ಪೀಕರ್ ಎಂದು ಹೇಳಿದ್ದಾರೆ. ಇದು ಸಂವಿಧಾನ ಬದ್ಧವಾದ ಸ್ಥಾನವಾಗಿದ್ದು, ಗೌರವ ಸಲ್ಲುವುದಲ್ಲ, ಸಂವಿಧಾನ ಪೀಠಕ್ಕೆ ಮತ್ತು ಸಭಾಧ್ಯಕ್ಷ ಸ್ಥಾನಕ್ಕೆ ಸಲ್ಲುವುದು. ಅಲ್ಲಿ ಕೂರುವ ನಾವು ಗೌರವ ಉಳಿಸುವ ಕೆಲಸ ಮಾಡಬೇಕು ಎಂದು ಯು.ಟಿ.ಖಾದರ್ ಪ್ರತಿಪಾದಿಸಿದ್ದಾರೆ.

ಯಾರ ಹೇಳಿಕೆಗೂ ಪ್ರತಿಕ್ರಿಯಿಸುವುದಿಲ್ಲ ಎಂದಿರುವ ಅವರು, ಸಂವಿಧಾನಕ್ಕೆ ಅನುಗುಣವಾಗಿ ಕೆಲಸ ಮಾಡುತ್ತೇನೆ. ನಾನು ಎಲ್ಲರಿಗೂ ಗೌರವ ಕೊಟ್ಟು ಗೌರವ ಪಡೆಯುತ್ತೇನೆ. ಎಲ್ಲರ ಸ್ಪೀಕರ್ ಆಗಿ ಕೆಲಸ ನಿರ್ವಹಿಸುತ್ತೇನೆ. ಸ್ಪೀಕರ್ ಸ್ಥಾನವನ್ನು ಜಾತಿ ಧರ್ಮ ಬಿಟ್ಟು ನೋಡಬೇಕು ಎಂದು ಹೇಳಿದ್ದಾರೆ.

Related posts