ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬಿಜೆಪಿ ಕಾರ್ಯಕರ್ತರಿಗೆ ಪೊಲೀಸರಿಂದ ಕಿರುಕುಳ ಹೆಚ್ಚಾಗಿದೆ ಎಂದು ಆರೋಪಿಸುತ್ತಿರುವ ಪ್ರತಿಪಕ್ಷ ಬಿಜೆಪಿ, ಇದೀಗ ಪೊಲೀಸರ ಕಿರುಕುಳ ಎದುರಿಸುವವರಿಗಾಗಿ ಕಂಟ್ರೋಲ್ ರೂಂ ತೆರೆಯಲು ಮುಂದಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ನಮ್ಮ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಟ್ಟುಕೊಂಡು ಪೊಲೀಸ್ ಕಿರುಕುಳ ನೀಡುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ. ಸಾಮಾಜಿಕ ಜಾಲತಾಣ ಸೇರಿದಂತೆ ಯಾವುದೇ ವೇದಿಕೆಗಳಲ್ಲಿ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಧೋರಣೆಯ ವಿರುದ್ಧ ಹಾಗೂ ಸರ್ಕಾರದ ವೈಫಲ್ಯಗಳ ವಿರುದ್ಧ ದನಿ ಎತ್ತಲು ಕಾರ್ಯಕರ್ತರು ಯಾವುದಕ್ಕೂ ಅಂಜ ಬೇಕಿಲ್ಲ, ಎದೆಗುಂದ ಬೇಕಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸಂವಿಧಾನ ನಮಗೆ ಕೊಡಮಾಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು, ಕಾನೂನು ಪೋಲಿಸರಿಗೆ ಅಧಿಕಾರ ನೀಡಿಲ್ಲ, ಈ ನಿಟ್ಟಿನಲ್ಲಿ ರಾಜ್ಯದ ಯಾವುದೇ ಮೂಲೆಯಲ್ಲೂ ನಮ್ಮ ಕಾರ್ಯಕರ್ತ ಬಂಧುಗಳಿಗೆ ತೊಂದರೆ, ಬೆದರಿಕೆ, ಕಿರುಕುಳಗಳು ಎದುರಾದರೆ ಅವರ ನೆರವಿಗೆ ಪಕ್ಷ ತಕ್ಷಣ ಬರಲಿದೆ ಎಂದು ಭರವಸೆ ನೀಡಿದ್ದಾರೆ.
ರಾಜ್ಯ ಹಾಗೂ ಜಿಲ್ಲೆಯ ಪಕ್ಷದ ಕಛೇರಿಗಳಲ್ಲಿ ಕಾನೂನು ನೆರವಿಗಾಗಿ ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲು ಕಂಟ್ರೋಲ್ ರೂಂ ತೆರೆಯುವ ಬಗ್ಗೆ ನಿರ್ಧರಿಸಲಾಗುವುದು ಎಂದವರು ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ನಮ್ಮ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಟ್ಟುಕೊಂಡು ಪೊಲೀಸ್ ಕಿರುಕುಳ ನೀಡುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ.
ಸಾಮಾಜಿಕ ಜಾಲತಾಣ ಸೇರಿದಂತೆ ಯಾವುದೇ ವೇದಿಕೆಗಳಲ್ಲಿ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಧೋರಣೆಯ ವಿರುದ್ಧ ಹಾಗೂ ಸರ್ಕಾರದ ವೈಫಲ್ಯಗಳ ವಿರುದ್ಧ ದನಿ ಎತ್ತಲು ಕಾರ್ಯಕರ್ತರು…— Vijayendra Yediyurappa (Modi Ka Parivar) (@BYVijayendra) November 26, 2023