ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಕೊರೋನಾ ಆತಂಕದ ನಡುವೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುತ್ತಿದ್ದು ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿವಿಧ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಧೈರ್ಯ ತುಂಬುತ್ತಿದ್ದಾರೆ.
ಇಂದು ಚಿಕ್ಕಬಳ್ಳಾಪುರದ ಸರ್ಕಾರಿ ಪ್ರೌಢ ಶಾಲೆ, ಬಿಜಿಎಸ್. ನ್ಯೂ ಹಾರಿಜಾನ್, ಸಂತ ಜೋಸೆಪ್ ಶಾಲೆಗಳಲ್ಲಿರುವ ಪರೀಕ್ಷಾ ಕೇಂದ್ರಗಳಿಗೆ ಭೇಟಿನೀಡಿ ಪರೀಕ್ಷಾರ್ಥಿ ವಿದ್ಯಾರ್ಥಿಗಳಿಗೆ ಶುಭ ಕೋರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕ್ಷಣ ಸಚಿವ ಎಸ್.ಸುರೇಶ್ ಕುಮಾರ್, ಆಗಸ್ಟ್ ಮೊದಲ ವಾರದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದರು. ಜುಲೈ ಅಂತ್ಯದ ವೇಳೆಗೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದೂ ಅವರು ಹೇಳಿದರು.