ಸಚಿವ ಸುಧಾಕರ್‌’ಗೆ ಕೋವಿಡ್-19 ಉಸ್ತುವಾರಿ; ಸಿಎಂ ತೀರ್ಮಾನದ ಅಚ್ಚರಿ

ಬೆಂಗಳೂರು: ಜಗತ್ತಿನಾದ್ಯಂತ ಕೊರೋನಾ ವೈರಸ್ ಆತಂಕದ ಛಾಯೆಯನ್ನೇ ಆವರಿಸುವಂತೆ ಮಾಡಿದೆ. ಕರ್ನಾಟಕದಲ್ಲೂ ಸೋಂಕಿತರ ಸಂಖ್ಯೆ ಹೆಚ್ಚುತಲಿದ್ದು ಇದೀಗ ಆ ಸಂಖ್ಯೆ 39ಕ್ಕೆ ಏರಿಕೆಯಾಗಿದೆ.
ಲಾಕ್ ಡೌನ್ ನಡುವೆಯೂ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚುತ್ತಲಿರುವುದರಿಂದ ಪರಿಸ್ಥಿತಿ ನಿಯಂತ್ರಿಸುವುದು ಸರ್ಕಾರಕ್ಕೂ ಸವಾಲಾಗಿ ಪರಿಣಮಿಸಿದೆ.
ಈ ನಡುವೆ ಕೊರೋನಾ ವಿಚಾರದಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಅವರ ಮೇಲಿದ್ದ ಹೊಣೆಗಾರಿಕೆಯ ಹೊರೆಯನ್ನು ಕಡಿಮೆ ಮಾಡುವ ಅಚ್ಚರಿಯ ನಿರ್ಧಾರವನ್ನು ಸಿಎಂ ಯಡಿಯೂರಪ್ಪ ಕೈಗೊಂಡಿದ್ದಾರೆ.
ಸೋಂಕು ನಿಯಂತ್ರಣ ಸಂಬಂಧದ ಕಾರ್ಯಾಚರಣೆಯ ಉಸ್ತುವಾರಿಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಆಪ್ತ ಸಚಿವರಲ್ಲೊಬ್ಬರಾದ ಡಾ.ಸುಧಾಕರ್’ಗೆ ವಹಿಸಿದ್ದಾರೆ.
ಸಾಂಕ್ರಾಮಿಕ ರೋಗಗಳ ನಿಯಂತ್ರಣದ ಹೊಣೆ ಆರೋಗ್ಯ ಇಲಾಖೆ ವ್ಯಾಪ್ತಿಯಲ್ಲಿ ಇರುತ್ತಿತ್ತು. ಇದೀಗ ಯಡಿಯೂರಪ್ಪ, ಈ ಹೊಣೆಯನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಗೆ ವಹಿಸಿದ್ದಾರೆ. ಈ ಸಂಬಂಧ ಅವರು ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ಶಿಫಾರಸು ಮಾಡಿದ್ದು ರಾಜಭವನದಿಂದ ಆದೇಶ ಕೂಡಾ ಹೊರಬಿದ್ದಿದೆ.

Related posts