ನಟಿ ಸುಧಾರಾಣಿಗೆ ವೈದ್ಯರ ರಗಳೆ; ಆಸ್ಪತ್ರಗೆ ಎಚ್ಚರಿಕೆ ನೀಡಿದ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಾಣು ಹಾವಳಿ ಮುಂದುವರಿದಿದ್ದು ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇವೆ. ಈ ಸಂದರ್ಭದಲ್ಲೇ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಸರಿಯಾಗಿ ಚಿಕಿತ್ಸೆ ಸಿಗುತ್ತಿಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ. ಕೊರೋನಾ ಮಾತ್ರವಲ್ಲ ಇತರೆ ಕಾಯಿಲೆಗಳಿಗೂ ಚಿಕಿತ್ಸೆ ಸಿಗುತ್ತಿಲ್ಲ. ನಟಿ ಸುಧಾರಾಣಿಗೂ ಇದೇ ರೀತಿ ಅನುಭವವಾಗಿದೆ. ಸುಧಾರಾಣಿಯ ಸಂಬಂಧಿ ಅನಾರೋಗ್ಯ ಕಾರಣದಿಂದ ಆಸ್ಪತ್ರೆಗೆ ತೆರಳಿದ ಸಂದರ್ಭದಲ್ಲಿ ರೋಗಿಯನ್ನು ಚಿಕಿತ್ಸೆಗಾಗಿ ದಾಖಲಿಸಿಕೊಳ್ಳಲು ಆಸ್ಪತ್ರೆ ಸಿಬ್ಬಂದಿ ಹಿಂದೇಟು ಹಾಕಿದ್ದಾರೆನ್ನಲಾಗಿದೆ. ಸುಧಾರಾಣಿ ಸಹಿತ ರೋಗಿಯ ಸಂಬಂಧಿಗಳೂ ಇದರಿಂದಾಗಿ ಗೊಂದಲಕ್ಕೀಡಾಗಿದ್ದರು.

ಈ ವಿಚಾರ ಭಾರೀ ಸುದ್ದಿಯಾಗಿದ್ದು ಸರ್ಕಾರಕ್ಕೂ ಮುಜುಗರ ಉಂಟಾಗಿದೆ. ಇಂತಹಾ ಆಸ್ಪತ್ರೆಗಳ ವಿರುದ್ಧ ಶಿಸ್ತು ಕ್ರಮವಹಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಹೇಳಿದ್ದಾರೆ.

ಈ ಕುರಿತಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಟ್ವೀಟ್ ಮಾಡಿದ್ದು, ನಟಿ ಸುಧಾರಾಣಿ ಸಂಬಂಧಿ ಅರೋಗ್ಯ ಸಮಸ್ಯೆಯಿಂದ ಶೇಷಾದ್ರಿಪುರಂ ಅಪೋಲೋ ಆಸ್ಪತ್ರೆಗೆ ಬಂದರೂ ಚಿಕಿತ್ಸೆಗೆ ತಡಮಾಡಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ನೋಡಿದೆ. ಅವರಷ್ಟೇ ಅಲ್ಲ ಸಾಮಾನ್ಯ ವ್ಯಕ್ತಿ ಯಾರೇ ಆಗಲಿ ಚಿಕಿತ್ಸೆ ಸಿಗದೇ ಪರದಾಡಬಾರದು. ಆ ಖಾಸಗಿ ಆಸ್ಪತ್ರೆಯ ವಿರುದ್ಧ ಶಿಸ್ತು ಕ್ರಮವಹಿಸಲಾಗುವುದು ಎಂದಿದ್ದಾರೆ.

ಕೋವಿಡ್ ಟೆಸ್ಟ್ ವರದಿ ಇಲ್ಲವೆಂದು ಯಾವುದೇ ಖಾಸಗಿ ಆಸ್ಪತ್ರೆಯೂ ರೋಗಿಗಳಿಗೆ ಚಿಕಿತ್ಸೆ ನಿರಾಕರಿಸುವಂತಿಲ್ಲ. ಕೊರೊನಾ ಲಕ್ಷಣವಿರಲಿ ಅಥವಾ ಬೇರೆ ಯಾವುದೇ ಖಾಯಿಲೆ ಇರಲಿ ಆಸ್ಪತ್ರೆಯಲ್ಲಿ ಹಾಸಿಗೆ ಲಭ್ಯವಿದ್ದೂ ದಾಖಲಾತಿ ನಿರಾಕರಿಸಿದರೆ ಅಂತಹ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದೂ ಸಚಿವ ಡಾ.ಸುಧಾಕರ್ ಹೇಳಿದ್ದಾರೆ.

ಇದನ್ನೂ ಓದಿ.. ಕಡಲ ತೀರದಲ್ಲಿ ಸುನಾಮಿ ರೀತಿ ಅಲೆ? ಪ್ರವಾಹದ ಸುಳಿಯಲ್ಲಿ ಸಿಲುಕಿದ ಜನ.. ಭಾಯಾನಕ ದೃಶ್ಯ 

 

Related posts