ನವದೆಹಲಿ: ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ, ಪವಿತ್ರಾ ಗೌಡ ಸೇರಿದಂತೆ 7 ಮಂದಿ ಮತ್ತೆ ಜೈಲುಪಾಲು. ಹೈಕೋರ್ಟ್ ನೀಡಿದ್ದ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್ ಗುರುವಾರ ರದ್ದುಪಡಿಸಿದೆ.
ನ್ಯಾಯಮೂರ್ತಿ ಜೆ.ಬಿ. ಪಾರ್ದಿವಾಲಾ ಮತ್ತು ನ್ಯಾಯಮೂರ್ತಿ ಆರ್. ಮಹಾದೇವನ್ ನೇತೃತ್ವದ ಪೀಠವು, “ಆರೋಪಿ ಎಷ್ಟೇ ಪ್ರಭಾವಿ ಇದ್ದರೂ ಕಾನೂನಿಗಿಂತ ಮೇಲಲ್ಲ” ಎಂದು ಸ್ಪಷ್ಟ ಸಂದೇಶ ನೀಡಿದೆ.
2023ರ ಜೂನ್ 9ರಂದು ಚರಂಡಿಯಲ್ಲಿ ಪತ್ತೆಯಾದ 33 ವರ್ಷದ ರೇಣುಕಸ್ವಾಮಿ ಶವಪತ್ತೆಯಾಗಿತ್ತು. ಈ ಪ್ರಕರಣದಲ್ಲಿ, ನಟ ದರ್ಶನ್ ಅವರನ್ನು ಜೂನ್ 11ರಂದು ಬಂಧಿಸಲಾಗಿತ್ತು. ಪವಿತ್ರಾ ಗೌಡರನ್ನು ಮೊದಲ ಹಾಗೂ ದರ್ಶನ್ ಅವರನ್ನು ಎರಡನೇ ಆರೋಪಿಗಳೆಂದು ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಿದ್ದರು.
ಮೊದಲು ಸೆಷನ್ಸ್ ಕೋರ್ಟ್ ಜಾಮೀನು ನಿರಾಕರಿಸಿದರೂ, ಹೈಕೋರ್ಟ್ ಅನುಮೋದಿಸಿತ್ತು. ಸರ್ಕಾರ ಆ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿತ್ತು.
ಅದೇ ವೇಳೆ, ಆರೋಪಿಗಳಿಗೆ ಜೈಲಿನಲ್ಲಿ ಯಾವುದೇ ವಿಶೇಷ ಸೌಲಭ್ಯ ಕಲ್ಪಿಸಬಾರದೆಂದು ಕೋರ್ಟ್ ಎಚ್ಚರಿಕೆ ನೀಡಿದ್ದು, ಉಲ್ಲಂಘಿಸಿದರೆ ಜೈಲು ಸೂಪರಿಂಟೆಂಡೆಂಟ್ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳನ್ನು ಅಮಾನತುಗೊಳಿಸಲಾಗುವುದು ಎಂದು ತಿಳಿಸಿದೆ.