17 ಶಾಸಕರ ಅನರ್ಹತೆ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್​

ಕರ್ನಾಟಕದ 17 ಶಾಸಕರನ್ನು ಅನರ್ಹ ಮಾಡಿದ ಮಾಜಿ ಸ್ಪೀಕರ್​ ಕೆ.ಆರ್​. ರಮೇಶ್​ ಕುಮಾರ್​ ನೀಡಿದ್ದ ಅನರ್ಹತೆ ಆದೇಶವನ್ನು ಸುಪ್ರೀಂ ಕೋರ್ಟ್​ ಎತ್ತಿ ಹಿಡಿದಿದೆ. ಅನರ್ಹ ಶಾಸಕರಿಗೆ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶವನ್ನೂ ಸುಪ್ರೀಂ ಕೋರ್ಟ್​​ ನೀಡಿದೆ. ವಿಚಾರಣೆ ನಡೆಸಿದ ನ್ಯಾ. ಎನ್.ವಿ. ರಮಣ, ನ್ಯಾ. ಸಂಜೀವ್ ಖನ್ನಾ, ನ್ಯಾ. ಕೃಷ್ಣ ಮುರಾರಿ ಅವರಿರುವ ತ್ರಿಸದಸ್ಯ ಪೀಠ ಆದೇಶವನ್ನು ಕಾಯ್ದಿರಿಸಿತ್ತು. ಅದರಂತೆ ಇಂದು ತೀರ್ಪನ್ನು ನೀಡಿದೆ.

ಕಾಂಗ್ರೆಸ್​ನ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ, ಅಥಣಿಯ ಮಹೇಶ್ ಕುಮಠಹಳ್ಳಿ, ರಾಣೇಬೆನ್ನೂರು ಶಾಸಕ ಆರ್. ಶಂಕರ್ ಮಸ್ಕಿ ಶಾಸಕ ಪ್ರತಾಪ ಗೌಡ ಪಾಟೀಲ್, ಯಶವಂತಪುರದ ಎಸ್.ಟಿ. ಸೋಮಶೇಖರ್, ಕೆ.ಆರ್​.ಪುರದ ಭೈರತಿ ಬಸವರಾಜು, ಯಲ್ಲಾಪುರದ ಶಿವರಾಮ್ ಹೆಬ್ಬಾರ್, ಹಿರೇಕೆರೂರು ಶಾಸಕ ಬಿ.ಸಿ. ಪಾಟೀಲ್, ಆರ್​.ಆರ್​. ನಗರ ಶಾಸಕ ಮುನಿರತ್ನ, ಶಿವಾಜಿನಗರ ಶಾಸಕ ರೋಷನ್ ಬೇಗ್, ಚಿಕ್ಕಬಳ್ಳಾಪುರದ ಡಾ. ಸುಧಾಕರ್, ಹೊಸಕೋಟೆಯ ಎಂಟಿಬಿ ನಾಗರಾಜ್, ಮಹಾಲಕ್ಷ್ಮೀ ಲೇಔಟ್​ನ ಕೆ. ಗೋಪಾಲಯ್ಯ, ಕೆ.ಆರ್​. ಪೇಟೆಯ ನಾರಾಯಣಗೌಡ, ವಿಜಯನಗರದ ಆನಂದ್ ಸಿಂಗ್, ಹುಣಸೂರಿನ ಹೆಚ್. ವಿಶ್ವನಾಥ್, ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ಅವರನ್ನು ಅವರನ್ನು ಅಂದಿನ ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದರು.

ಸ್ಪೀಕರ್ ಆದೇಶ ಪ್ರಶ್ನಿಸಿ ಆಗಸ್ಟ್​ 1ರಂದು ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ನ್ಯಾಯಪೀಠ, ಇಂದು ತೀರ್ಪು ಪ್ರಕಟಿಸಿದೆ. 17 ಶಾಸಕರು ರಾಜೀನಾಮೆ ನೀಡುವ ಮೂಲಕ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದು ಹೌದು ಎಂದು ಒಪ್ಪಿಕೊಂಡ ಸುಪ್ರೀಂಕೋರ್ಟ್​. ಅನರ್ಹತೆಯನ್ನು ಕೋರ್ಟ್​ ಎತ್ತಿ ಹಿಡಿದಿದೆ. ಆದರೆ, ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡುತ್ತಿದ್ದೇವೆ. 2023ರವರೆಗೂ ಚುನಾವಣೆಗೆ ಸ್ಪರ್ಧಿಸಲು ನಿರ್ಬಂಧ ಹೇರುವುದು ಸರಿಯಲ್ಲ. ಜನಪ್ರತಿನಿಧಿ ಕಾಯ್ದೆ ಪ್ರಕಾರ, 6 ವರ್ಷ ಚುನಾವಣೆ ನಿಲ್ಲಬಾರದು ಎಂಬ ಕಾನೂನು ಇಲ್ಲ. ಶಾಸಕರ ಅನರ್ಹತೆಯ ಅವಧಿಯನ್ನ ಸ್ಪೀಕರ್​ ನಿರ್ಧರಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.

Uncategorized

Related posts