ಅಹಮದಾಬಾದ್: ಅಯೋಧ್ಯೆಯ ರಾಮಮಂದಿರದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಶಂಕಿತನನ್ನು ಗುಜರಾತ್ ಪೊಲೀಸರು ಬಂಧಿಸಿದ್ದಾರೆ.
ಫರಿದಾಬಾದ್ ಪೊಲೀಸರ ಸಹಾಯದೊಂದಿಗೆ ಕಾರ್ಯಾಚರಣೆ ನಡೆಸಿದ ಗುಜರಾತ್ ಎಟಿಎಸ್ ತಂಡವು ಭಯೋತ್ಪಾದಕ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದ ಶಂಕಿತ ಉಗ್ರನನ್ನ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತನನ್ನು 19 ವರ್ಷದ ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದ್ದು, ಈತನನ್ನು ವಶಕ್ಕೆ ಪಡೆದು ವಿಚಾರಣೆಗೆ ಗುರಿಪಡಿಸಿದಾಗ ಮಹತ್ವದ ಸಂಗತಿಗಳು ಬೆಳಕಿಗೆ ಬಂದಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಈತ ನೀಡಿದ ಸುಳಿವು ಆಧರಿಸಿ ಕಾರ್ಯಾಚರಣೆ ನಡೆಸಿರುವ ಎಟಿಎಸ್ ಅಧಿಕಾರಿಗಳು, ಪಾಳುಬಿದ್ದ ಮನೆಯೊಂದರಲ್ಲಿ ಎರಡು ಜೀವಂತ ಹ್ಯಾಂಡ್ ಗ್ರೆನೇಡ್‌ಗಳನ್ನು ಪತ್ತೆ ಮಾಡಿದ್ದಾರೆ.