ಆಸ್ತಿ ಕಾರ್ಡ್ ವಿತರಣೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ದೆಹಲಿ: ಗ್ರಾಮೀಣ ಪ್ರದೇಶಗಳ ಜನರಿಗೆ ವರದಾನವಾಗುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಇಟ್ಟಿದೆ. ಗ್ರಾಮೀಣ ಪ್ರದೇಶಗಳಲ್ಲಿ ಸುಧಾರಿತ ತಂತ್ರಜ್ಞಾನದ ಸ್ವಾಮಿತ್ವ ಯೋಜನೆ ಮೂಲಕ ಆಸ್ತಿ ಕಾರ್ಡ್ ವಿತರಣೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.

ಗ್ರಾಮೀಣ ಪ್ರದೇಶಗಳ ಮನೆಗಳು ಮತ್ತು ಹಳ್ಳಿ ಪ್ರದೇಶಗಳ ಆಸ್ತಿ ಹಕ್ಕುಪತ್ರಗಳ ಭೌತಿಕ ಪ್ರತಿ ಇದಾಗಿದೆ. ಏಪ್ರಿಲ್ ನಲ್ಲಿ ಆರಂಭಿಸಿದ ಸ್ವಾಮಿತ್ವ ಯೋಜನೆ ಗ್ರಾಮೀಣ ಜನರು ಆಸ್ತಿಯನ್ನು ಆರ್ಥಿಕ ಆಸ್ತಿಯಾಗಿ ಬಳಸಲು ಅವಕಾಶ ನೀಡಲಿದೆ. ಯೋಜನೆಯಿಂದ 6.62 ಲಕ್ಷ ಗ್ರಾಮಗಳಿಗೆ ಲಾಭವಾಗಲಿದ್ದು, ಯೋಜನೆಯಡಿಯಲ್ಲಿ ರೈತರ ಜಮೀನುಗಳು ಸಂಪೂರ್ಣ ಡಿಜಿಟಲೀಕರಣಗೊಳ್ಳಲಿದೆ.

Related posts