ಬೆಂಗಳೂರು: ರಾಜ್ಯದಲ್ಲಿ ವಾಹನಗಳಿಗೆ ಅತೀ ಸುರಕ್ಷಾ ನೋಂದಣಿ ಫಲಕ (HSRP) ಅಳವಡಿಸುವ ಯೋಜನೆ ಜಾರಿಗೆ ಮುನ್ನವೇ ಅಕ್ರಮದ ಸಂಚು ನಡೆದಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ಮಧ್ಯಪ್ರವೇಶಿಸಬೇಕೆಂದು ಬೆಂಗಳೂರು ವಿವಿ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟ ಒತ್ತಾಯಿಸಿದೆ. ಈ ಸಂಬಂಧ ತಮ್ಮ ಒಕ್ಕೂಟವು ಸಿಎಂ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ನೀಡಿರುವ ದೂರಿನ ಆಧಾರದಲ್ಲಿ ಸೂಕ್ತ ಕ್ರಮವಿಡಬೇಕೆಂದು ಆಗ್ರಹಿಸಿದೆ, ಬೆಂಗಳೂರು ಪ್ರೆಸ್ ಕ್ಲಬ್’ನಲ್ಲಿ ಗುರುವಾರ (29.06.2023) ಸುದ್ದಿಗೋಷ್ಠಿ ನಡೆಸಿದ ಒಕ್ಕೂಟದ ಅಧ್ಯಕ್ಷರೂ ಆದ ಸಾಮಾಜಿಕ ಹೋರಾಟಗಾರ ಲೋಕೇಶ್ ರಾಮ್, ಕೇಂದ್ರ ಸರ್ಕಾರ ಜಾರಿಗೊಳಿಸಲುದ್ದೇಶಿಸಿರುವ ಈ ಯೋಜನೆಯನ್ನು ಲಂಚದ ಆಸೆಗಾಗಿ ಹಾದಿತಪ್ಪಿಸುವ ಹುನ್ನಾರ ನಡೆದಿದೆ ಎಂದು ಆರೋಪಿಸಿದರು. ಏನಿದು ಅಕ್ರಮದ ಸಂಚು? ವಾಹನ ಕಳ್ಳತನ ತಡೆಯುವುದು, ಕದ್ದ ವಾಹನಗಳನ್ನು ಬಳಸಿ ನಡೆಯುವ ಕೃತ್ಯಗಳನ್ನು ಹಾಗೂ ಕಾನೂನು ಉಲ್ಲಂಘನೆಯಂತಹಾ ಪ್ರಕರಣಗಳನ್ನು ಬೇಧಿಸಲು ಅನುಕೂಲವಾಗುವಂತೆ HSRP ಅಳವಡಿಕೆ ಕಡ್ಡಾಯಗೊಳಿಸಲು ಕೇಂದ್ರ…