ಸದನದಲ್ಲಿ ಗಲಭೆಗೆ ಪ್ರಚೋದಿಸಿದರೇ ಅಶೋಕ್? ಸ್ಪೀಕರ್’ಗೆ ಕಾಂಗ್ರೆಸ್ ದೂರು, ವಿಪಕ್ಷ ನಾಯಕರ ಅಮಾನತಿಗೆ ಆಗ್ರಹ

ಬೆಂಗಳೂರು: ವಿಧಾನಸಭೆಯಲ್ಲಿ ಸದನಕ್ಕೆ ಅಗೌರವ ತೋರಿದ ಆರೋಪದಲ್ಲಿ ಬಿಜೆಪಿಯ 18 ಶಾಸಕರನ್ನು ಅಮಾನತು ಮಾಡಲಾಗಿದೆಯಾದರೂ ಆ ಅಶಿಸ್ತಿಗೆ ಪ್ರಚೋದನೆ ನೀಡಿರುವ ಪ್ರತಿ ಪಕ್ಷ ನಾಯಕ ಆರ್.ಅಶೋಕ್ ಮೇಲೆ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಆಡಳಿತಾರೂಢ ಕಾಂಗ್ರೆಸ್ ಗಮನಸೆಳೆದಿದೆ. ಈ ಕುರಿತಂತೆ ಕೆಪಿಸಿಸಿ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಅವರು ಸ್ಪೀಕರ್ ಯು.ಟಿ.ಖದರ್ ಅವರಿಗೆ ನೀಡಿದ್ದಾರೆ. ಸಂಸದೀಯ ವಿಶ್ಲೇಷಕರೂ, ವಕೀಲರೂ ಆಗಿರುವ ಮಾಜಿ ಶಾಸಕ ರಮೇಶ್ ಬಾಬು ಅವರು ವಿಧಾನಸಭೆಯ ಅಧಿವೇಶನದಲ್ಲಿ ಶುಕ್ರವಾರ ಸದನಕ್ಕೆ ಮತ್ತು ಸಭಾಧ್ಯಕ್ಷರಿಗೆ ಅಗೌರವ ತೋರಿದ ಮತ್ತು ಅಶಿಸ್ತಿನಿಂದ ನಡೆದುಕೊಂಡ ಸದಸ್ಯರನ್ನು ಅಮಾನತ್ತುಗೊಳಿಸುವ ಸಂದರ್ಭ ಸದನವು ಅಂಗೀಕರಿಸಿದ ಪ್ರಸ್ತಾವದ ಲೋಪ ಕುರಿತು ಸ್ಪೀಕರ್ ಅವರ ಗಮನಸೆಳೆದಿದ್ದಾರೆ. ಸದನಕ್ಕೆ ಮತ್ತು ಸಭಾಧ್ಯಕ್ಷರಿಗೆ ಅಗೌರವ ತೋರಿದ ಮತ್ತು ಅಶಿಸ್ತಿನಿಂದ ನಡೆದುಕೊಂಡ ಸದಸ್ಯರನ್ನು ಅಮಾನತ್ತುಗೊಳಿಸುವ ಸಂದರ್ಭ 21-03-2025 ರಂದು ಸದನದಲ್ಲಿ ಕಾನೂನು ಮತ್ತು ಸಂಸದೀಯ ಸಚಿವ ಹೆಚ್.ಕೆ.ಪಾಟೀಲ್…

ವಿರೋಧ ಪಕ್ಷದ ನಾಯಕ ಸ್ಥಾನ ಉಳಿಸಿಕೊಳ್ಳಲು ನವರಂಗಿ ಆಟ? ಅಶೋಕ್ ವಿರುದ್ಧ ರಮೇಶ್ ಬಾಬು ಟೀಕಾಸ್ತ್ರ

ಬೆಂಗಳೂರು: ಪ್ರತಿಪಕ್ಷ ನಾಯಕ ಸ್ಥಾನ ಉಳಿಸಿಕೊಳ್ಳಲು ಆರ್.ಅಶೋಕ್ ನವರಂಗಿ ಆಟ ಆಡುತ್ತಿದ್ದಾರೆ ಎಂದು ಮಾಜಿ ಶಾಸಕರೂ ಆದ ಕೆಪಿಸಿಸಿ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಕಟುವಾಗಿ ಟೀಕಿಸಿದ್ದಾರೆ. ಚನ್ನಪಟ್ಟಣದ ಉಪಚುನಾವಣೆಯಲ್ಲಿ ಮಾತನಾಡುವಾಗ ಆರ್ ಅಶೋಕ್ ರವರು ಕಾಂಗ್ರೆಸ್ ಪಕ್ಷದ ದುರಾಡಳಿತದ ವಿರುದ್ಧ ಉಪಚುನಾವಣೆ ನಡೆಯುತ್ತಿದೆ ಎಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯನ್ನು ಖಂಡಿಸಿರುವ ರಮೇಶ್ ಬಾಬು, ಬಹುತೇಕ ಕಾಂಗ್ರೆಸ್ ಪಕ್ಷಕ್ಕೆ ಅಥವಾ ಕರ್ನಾಟಕದ ಕಾಂಗ್ರೆಸ್ ನಾಯಕರಿಗೆ ಉಪಚುನಾವಣೆಗಳನ್ನು ದುರಾಡಳಿತದ ಮೇಲೆ ನಡೆಸುವ ಅವಶ್ಯಕತೆ ಇಲ್ಲ. ಅಂತಹ ಅವಶ್ಯಕತೆ ಏನಾದರೂ ಇದ್ದರೆ ಅದು ಭಾರತೀಯ ಜನತಾ ಪಕ್ಷದ ನಾಯಕರಿಗೆ ಮತ್ತು ಅವರ ಪಕ್ಷಕ್ಕೆ ಇರುತ್ತದೆ ಎಂದು ಎದಿರೇಟು ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ಮೇಲೆ ಆರೋಪ ಮಾಡುತ್ತಿರುವುದು ಅವರ ವಿರೋಧ ಪಕ್ಷದ ನಾಯಕ ಸ್ಥಾನವನ್ನು ಉಳಿಸಿಕೊಳ್ಳುವ ಹತಾಶ ಪ್ರಯತ್ನ. ಕರ್ನಾಟಕದ ನವರಂಗಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್…

‘ಶಕ್ತಿ’ ಫೈಟ್..! ಸಾಮ್ರಾಟ್ ಟ್ವೀಟ್‌ಗೆ ರಾಮಲಿಂಗಾ ರೆಡ್ಡಿ ಗರಂ; ಬಹಿರಂಗ ಚರ್ಚೆಗೆ ಪಂಥಾಹ್ವಾನ..

ಬೆಂಗಳೂರು: ‘ಶಕ್ತಿ’ ಗ್ಯಾರೆಂಟಿ ಯೋಜನೆ ವಿಚಾರ ಮುಂದಿಟ್ಟು ಸರ್ಕಾರದ ವಿರುದ್ದ ಪ್ರತಿಪಕ್ಷ ಬಿಜೆಪಿ ನಾಯಕರು ಟೀಕಾಸ್ತ್ರ ಪ್ರಯೋಗಿಸುತ್ತಿದ್ದಾರೆ. ಅದರಲ್ಲೂ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್ ಅಶೋಕ್ ಅವರು ಸಾಮಾಜಿಕ ಜಾಲತಾಣ ‘X’ನಲ್ಲಿ ಹಾಕಿರುವ ಪೋಸ್ಟ್ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಕೆಂಡಾ ಮಂಡಲರಾಗಿದ್ದಾರೆ.‌ ಅಶೋಕ್ ಹೇಳಿಕೆ ಬಗ್ಗೆ ಆಕ್ರೋಶ ಹೊರಹಾಕಿರುವ ಸಚಿವ ರಾಮಲಿಂಗಾ ರೆಡ್ಡಿ, ಟ್ವೀಟ್ ಬಿಟ್ಟು ಬಹಿರಂಗ ಚರ್ಚೆಗೆ ಬರುವಂತೆ ಪಂಥಾಹ್ವಾನ ನೀಡಿದ್ದಾರೆ‌ ಈ ಕುರಿತಂತೆ ರಾಮಲಿಂಗ ರೆಡ್ಡಿ ಸಾಮಾಜಿಕ ಜಾಲತಾಣ ‘X’ನಲ್ಲಿ ಎದಿರೇಟು ಎಂಬಂತೆ ಹಾಕಿರುವ ಪೋಸ್ಟ್ ಗಮನಸೆಳೆದಿದೆ. ‘ಶಕ್ತಿ’ ಯೋಜನೆ ಕುರಿತಂತೆ ಅಂಕಿ ಅಂಶಗಳನ್ನು ಮುಂದಿಟ್ಟಿರುವ ಅವರು, ಮೊಣಚು ಮಾತುಗಳಿಂದ ತಿವಿದಿದ್ದಾರೆ. ತಮಗೆ ಹಾಗೂ ತಮ್ಮ ಪಕ್ಷದವರಿಗೆ ಟ್ಟೀಟ್ ಮಾಡುವುದನ್ನು ಬಿಟ್ಟರೆ ಬೇರೇನೂ ಗೊತ್ತಿಲ್ಲ ಎಂಬುದನ್ನು ಜಗಜಾಹ್ಹೀರು ಮಾಡಿದ್ದೀರಿ ಎಂದು ಅಶೋಕ್ ಅವರನ್ನು ತರಾಟೆಗೆ ತೆಗೆದುಕೊಂಡಿರುವ ರಾಮಲಿಂಗ ರೆಡ್ಡಿ, ಶಕ್ತಿ ಯೋಜನೆಯು…

ವಿವಾದ ಸುಳಿಯಲ್ಲಿ ವಿಪಕ್ಷ ನಾಯಕ; ಅಶೋಕ್ ಅಕ್ರಮಗಳ ಬಗ್ಗೆ ಸಚಿವರಿಂದಲೇ ದಾಖಲೆಗಳ ಬಿಡುಗಡೆ

ಬೆಂಗಳೂರು: ಮುಡಾ ಹಗರಣ ವಿಚಾರದಲ್ಲಿ ಸೈಟ್ ಹಿಂದಿರುಗಿಸಿದರೂ ರಾಜೀನಾಮೆ ನೀಡಲೇಬೇಕು ಎಂದು ಆಗ್ರಹಿಸುತ್ತಿರುವ ಬಿಜೆಪಿಗೆ ಸಿದ್ದು ಸಂಪುಟದ ಸಚಿವರು ಎದಿರೇಟು ನೀಡಿದ್ದಾರೆ. ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ವಿರುದ್ದದ ಡಿನೊಟಿಫಿಕೇಶನ್ ಹಗರಣ ಆರೋಪ ಮುಂದಿಟ್ಟು ಕಾಂಗ್ರೆಸ್ ನಾಯಕರು ಬಿಜೆಪಿಯನ್ನೂ ಮುಜುಗರಕ್ಕೆ ಸಿಲುಕಿಸುವ ಪ್ರಯತ್ನ ನಡೆಸಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಸಚಿವರಾದ ಜಿ.ಪರಮೇಶ್ವರ್, ಹೆಚ್.ಕೆ.ಪಾಟೀಲ್, ಕೃಷ್ಣ ಬೈರೇಗೌಡ, ಸತೀಶ್ ಜಾರಕಿಹೊಳಿ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್ ಬಾಬು ನಡೆಸಿದ ಜಂಟಿ ಸುದ್ದಿಗೋಷ್ಠಿ ವಿದ್ಯಮಾನಗಳ ಕೇಂದ್ರಬಿಂದುವಾಯಿತು. ಗೃಹ ಸಚಿವ ಪರಮೇಶ್ವರ್ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ ಪರಿಹಾರವಾಗಿ ಬಂದಿದ್ದ 14 ನಿವೇಶನಗಳನ್ನು ವಾಪಸ್ ನೀಡಲಾಗಿದೆ. ಈ ಬಗ್ಗೆ ವಿರೋಧ ಪಕ್ಷದ ನಾಯಕರು ಬೇರೆ ಅರ್ಥ ಕಲ್ಪಿಸಿ, ತಪ್ಪು ಮಾಡಿರುವ ಕಾರಣ ವಾಪಸ್ ನೀಡಿದ್ದೀರಿ ಎಂದು ಆರೋಪ ಮಾಡಿದ್ದಾರೆ ಎಂದರು. ಲೊಟ್ಟೆಗೊಲ್ಲಹಳ್ಳಿಯಲ್ಲಿ ನೂರಾರು ಕೋಟಿ ಭೂ…

ಹಣ ನೀಡಲು ಮುಂದೆ ಬಂದ ಬಿಜೆಪಿ ನಾಯಕರು ಯಾರು? ಹಿಟ್‌ ಆಂಡ್‌ ರನ್‌ ಬೇಡ ಎಂದ ವಿಪಕ್ಷ ನಾಯಕ 

ಬೆಂಗಳೂರು: ಕಾಂಗ್ರೆಸ್‌ ಶಾಸಕರಿಗೆ ಹಣ ನೀಡುತ್ತೇವೆಂದು ಮುಂದೆ ಬಂದ ಬಿಜೆಪಿ ನಾಯಕರು ಯಾರೆಂದು ಸರಿಯಾಗಿ ತಿಳಿಸಲಿ. ಇಲ್ಲವಾದರೆ ಇದು ಹಿಟ್‌ ಆಂಡ್‌ ರನ್‌ ಆಗುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಮುಡಾ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಮುಳುಗಿರುವುದರಿಂದ ಸರ್ಕಾರ ಉಳಿಸಿಕೊಳ್ಳಲು ಶಾಸಕರಿಗೆ ಬೇರೆ ದಾರಿ ಇಲ್ಲ. ಇದಕ್ಕಾಗಿ ಬಿಜೆಪಿ ವಿರುದ್ಧ ಆಪಾದನೆ ಮಾಡಲಾಗಿದೆ. ಜನರ ಮನಸ್ಸನ್ನು ಬೇರೆಡೆ ಸೆಳೆಯುವ ಕುತಂತ್ರವಿದು. ಸರ್ಕಾರ ಬೀಳಿಸಲು ಬಿಜೆಪಿ ಯಾವುದೇ ಪ್ರಯತ್ನ ಮಾಡುತ್ತಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಲಾಗಿದೆ. ಅವರ ಪಕ್ಷದವರೇ ಸರ್ಕಾರ ಬೀಳಿಸಲು ಮುಂದಾಗಿದ್ದಾರೆ ಎಂದರು. ಕಾಂಗ್ರೆಸ್‌ ಶಾಸಕರ ಬಳಿ ಬಂದು ಮಾತಾಡಿದ ಬಿಜೆಪಿ ನಾಯಕರು ಯಾರು ಎಂದು ಕಾಂಗ್ರೆಸ್‌ ನಾಯಕರು ಸ್ಪಷ್ಟವಾಗಿ ತಿಳಿಸಲಿ. ಗ್ಯಾರಂಟಿಗಳನ್ನು ತೆಗೆದುಹಾಕಬೇಕೆಂದು ಶಾಸಕರೇ ಒತ್ತಾಯಿಸುತ್ತಿದ್ದಾರೆ. ಸರ್ಕಾರದಲ್ಲಿ ಹಣವಿಲ್ಲದೆ, ಮದ್ಯದ ತೆರಿಗೆಯನ್ನು ಮೂರನೇ ಬಾರಿಗೆ ಏರಿಕೆ…