ಬೆಂಗಳೂರು: “ಬಿಜೆಪಿ ಮತ್ತು ಜೆಡಿಎಸ್ ಪ್ರಮುಖ ನಾಯಕರು ತಮ್ಮ ಮಕ್ಕಳನ್ನು ರಾಜಕೀಯವಾಗಿ ಉಳಿಸಲು ಬಹುಮತದಿಂದ ಆಯ್ಕೆಯಾದ ಕಾಂಗ್ರೆಸ್ ಸರ್ಕಾರ ಉರುಳಿಸಲು ಪಿತೂರಿ ನಡೆಸುತ್ತಿದ್ದಾರೆ” ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ವ್ಯಾಖ್ಯಾನಿಸಿದ್ದಾರೆ.. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಸಚಿವರೊಂದಿಗೆ ಭಾನುವಾರ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು “ಪ್ರಜ್ವಲ್ ರೇವಣ್ಣ ಪ್ರಕರಣ ಹಾಗೂ ಹಲವಾರು ಪ್ರಕರಣಗಳಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಡೆಸುತ್ತಿರುವ ಪಿತೂರಿಯನ್ನು ದೇಶದ ಜನ ಗಮನಿಸಿದ್ದಾರೆ. ನಾವು ಜನರಿಗೆ ವಾಸ್ತವಾಂಶ ವಿವರಿಸುತ್ತೇವೆ. ಒಗ್ಗಟ್ಟಿನಿಂದ ಹೋರಾಡುತ್ತೇವೆ” ಎಂದರು. “ಈ ಹಿಂದೆ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರವನ್ನು ಉರುಳಿಸಿದ್ದ ಬಿಜೆಪಿ ಈಗಲೂ ಅದೇ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರವನ್ನು ಗುರಿಯಾಗಿಸಿಕೊಂಡಿದೆ. ಈ ಎಲ್ಲಾ ಬೆಳವಣಿಗೆಗಳ ಕುರಿತು ರಾಜ್ಯದ ಸಚಿವರೊಂದಿಗೆ ಚರ್ಚಿಸಲಾಗಿದೆ” ಎಂದು ಹೇಳಿದರು. ‘2023ರ ವಿಧಾನಸಭೆ ಚುನಾವಣೆ ಉಳ್ಳವರ ಮತ್ತು ಇಲ್ಲದವರು ನಡುವಿನ ಹೋರಾಟವಾಗಿತ್ತು.…