ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯು 2023 ಮತ್ತು 24 ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಪತ್ರಕರ್ತರಿಂದ ಲೇಖನಗಳನ್ನು ಆಹ್ವಾನಿಸಿದೆ. ಬೆಂಗಳೂರಿನ “ಅಭಿಮಾನಿ ಪ್ರಕಾಶನ” ಸಂಸ್ಥೆಯು ರಾಜ್ಯ ಮತ್ತು ಜಿಲ್ಲಾಮಟ್ಟದ ಕನ್ನಡ ಪತ್ರಿಕೆಗಳಲ್ಲಿ “ಸಾಮಾಜಿಕ ಸಮಸ್ಯೆ”ಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳಿಗೆ “ ಅಭಿಮಾನಿ ಪ್ರಶಸ್ತಿ” ಮೈಸೂರಿನ “ಮೈಸೂರು ದಿಗಂತ” ಪತ್ರಿಕಾ ಸಂಸ್ಥೆಯು “ಮಾನವೀಯ ಸಮಸ್ಯೆ” ಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳಿಗೆ “ಮೈಸೂರು ದಿಗಂತ ಪ್ರಶಸ್ತಿ“, ಬೆಂಗಳೂರಿನ ಅಭಿಮನ್ಯು ಪತ್ರಿಕಾ ಸಂಸ್ಥೆಯು “ದಮನಿತ ಸಮುದಾಯಗಳ ಪರ ದನಿಯಾದ ಅತ್ಯುತ್ತಮ ಲೇಖನ/ ಅಂಕಣ/ ಸಂಪಾದಕೀಯ/ ಪರಿಣಾಮಕಾರಿ ವರದಿಗೆ ಅಭಿಮನ್ಯು ಪ್ರಶಸ್ತಿ , ಬೆಂಗಳೂರಿನ “ಪ್ರಜಾ ಸಂದೇಶ” ಪತ್ರಿಕಾ ಸಂಸ್ಥೆಯು ಶೋಷಣೆಯನ್ನು ಪರಿಣಾಮ ಕಾರಿಯಾಗಿ ಬಿಂಬಿಸುವ ಲೇಖನಕ್ಕೆ ” ಪ್ರಜಾ ಸಂದೇಶ ದತ್ತಿ ಪ್ರಶÀಸ್ತಿ “ ಈ ದತ್ತಿ ಪ್ರಶಸ್ತಿಗಳು ತಲಾ ಹತ್ತು ಸಾವಿರ ರೂ. ನಗದು ಬಹುಮಾನ ಒಳಗೊಂಡಿದೆ. ಸಂಸ್ಥೆಗಳು…