ದ.ಕ.-ಉಡುಪಿ ಪರಿಷತ್ ಅಖಾಡ: ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ

ಉಡುಪಿ: ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನಪರಿಷತ್‌ಗೆ ನಡೆಯುವ ಉಪಚುನಾವಣೆಗೆ ಕಾಂಗ್ರೆಸ್‌ ಹುರಿಯಾಳಾಗಿ ಸಹಕಾರಿ ಧುರೀಣ ರಾಜು ಪೂಜಾರಿ ಅವರನ್ನು ಎಐಸಿಸಿ ಘೋಷಿಸಿದೆ. ಬಿಲ್ಲವ ಸಮುದಾಯದ ಪ್ರಾಬಲ್ಯವಿರುವ ಕರಾವಳಿ ಜಿಲ್ಲೆಯಲ್ಲಿ ಬಿಲ್ಲವ ಸಮುದಾಯದವರಿಗೆ ಟಿಕೆಟ್ ಪ್ರಕಟಿಸುವ ಮೂಲಕ ಅಖಾದಲ್ಲಿ ಕಾಂಗ್ರೆಸ್ ಪಕ್ಷ ಸಂಚಲನ ಸೃಷ್ಟಿಸಿದೆ ‌ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜು ಪೂಜಾರಿ ಅವರಿಗೆ ಟಿಕೆಟ್ ಘೋಷಿಸಿದ್ದಾರೆ. ಈ ಕುರಿತಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಕೋಟಾ ಶ್ರೀನಿವಾಸ ಪೂಜಾರಿ ಅವರು ಸಂಸದರಾಗಿ ಚುನಾಯಿತರಾದ ಸಂದರ್ಭದಲ್ಲಿ ರಾಜೀನಾಮೆ ನೀಡಿದ್ದರಿಂದ ತೆರವಾಗಿರುವ ಈ ಕ್ಷೇತ್ರಕ್ಕೆ ಇದೀಗ ಉಪಚುನಾವಣೆ ಘೋಷಣೆಯಾಗಿದೆ.‌ ನಾಮಪತ್ರ ಸಲ್ಲಿಕೆಗೆ ಗುರುವಾರ (ಸೆ.3) ಕೊನೆ ದಿನವಾಗಿದ್ದು ಮುನ್ನಾ ದಿನದಂದು ಕಾಂಗ್ರೆಸ್ ಪಕ್ಷ ಅಭ್ಯರ್ಥಿ ಹೆಸರನ್ನು ಘೋಷಿಸಿದೆ.

ದ.ಕ-ಉಡುಪಿ ವಿಧಾನಪರಿಷತ್ ಅಖಾಡ; ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಬೊಟ್ಯಾಡಿ

ಮಂಗಳೂರು: ಕೋಟ ಶ್ರೀನಿವಾಸ ಪೂಜಾರಿ ಪ್ರತಿನಿಧಿಸುತ್ತಿದ್ದ ಕರಾವಳಿಯ ವಿಧಾನ ಪರಿಷತ್ ಸ್ಥಾನಕ್ಜೆ ಬಿಜೆಪಿ ಅಭ್ಯರ್ಥಿಯಗಿ ಕಿಶೋರ್ ಕುಮಾರ್ ಬೊಟ್ಯಾಡಿ ಅವರನ್ನು ಪಕ್ಷ ಆಯ್ಕೆ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿಯವರು ಸಂಸದರಾಗಿ ಆಯ್ಕೆಯಾದ ಕಾರಣ ತೆರವಾಗಿದ್ದ ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಗೆ ಭಾರತೀಯ ಜನತಾ ಪಕ್ಷವು ಮಂಗಳವಾರ ತನ್ನ ಅಭ್ಯರ್ಥಿಯನ್ನು ಅಂತಿಮಗೊಳಿಸಿದೆ. ಮಾಜಿ ಸಂಸದ ನಳಿನ್‌ ಕುಮಾರ್‌ ಕಟೀಲ್‌, ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌, ದಕ್ಷಿಣ ಕನ್ನಡ ಬಿಜೆಪಿ ಅಧ್ಯಕ್ಷ ಸತೀಶ್‌ ಕುಂಪಲ ಸಹಿತ ಅನೇಕ ಮುಖಂಡರು ಲಾಭಿ ನಡೆಸುತ್ತಿದ್ದರು. ಇದೀಗ ಬಿಜೆಪಿ ನಾಯಕ ಕಿಶೋರ್‌ ಕುಮಾರ್‌ ಬೊಟ್ಯಾಡಿ ಅವರಿಗೆ ಹೈಕಮಾಂಡ್ ಟಿಕೆಟ್‌ ಘೋಷಣೆ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿರುವ ಕಿಶೋರ್‌ ಕುಮಾರ್‌ ಬೊಟ್ಯಾಡಿ ಅವರನ್ನು ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಯ ಅಭ್ಯರ್ಥಿಯಾಗಿ ಬಿಜೆಪಿ…