ಮಾಡು ಇಲ್ಲವೇ ಮಡಿ..! ಪಂಚಮಸಾಲಿ ಮೀಸಲಾತಿಗಾಗಿ ಡಿ.9ರಂದು ಸುವರ್ಣ ಸೌಧಕ್ಕೆ ಮುತ್ತಿಗೆ

ಬೆಂಗಳೂರು: ಪಂಚಮಸಾಲಿ ಮೀಸಲಾತಿ ಹೋರಾಟ ಇದೀಗ ನಿರ್ಣಾಯಕ ಹಂತ ತಲುಪಿದೆ. ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಡಿಸೆಂಬರ್ 9ರಂದು ಬೆಳಗಾವಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ತಯಾರಿ ನಡೆದಿದೆ. ಡಿಸೆಂಬರ್ 9 ಕ್ಕೆ ಸುವರ್ಣ ವಿಧಾನ ಸೌಧಕ್ಕೆ ಲಕ್ಷಾಂತರ ಪಂಚಮಸಾಲಿಗಳಿಂದ ಪಂಚಮಸಾಲಿ ವಕೀಲರ ನೇತೃತ್ವದಲ್ಲಿ ಹಾಗೂ ಟ್ರ್ಯಾಕ್ಟರ್ ಮೂಲಕ ಮುತ್ತಿಗೆ ಹಾಕಲಾಗುವುದು ಎಂದು ಕೂಡಲ ಸಂಗಮ ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠದ ಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ. ಪಂಚಮಸಾಲಿ 2a ಹಾಗೂ ಲಿಂಗಾಯತ ಉಪಸಮಾಜಗಳ OBC ಮೀಸಲಾತಿ ನೀಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡದ ಕಾರಣ ಈ ಹೋರಾಟ ನಡೆಸಲಾಗುತ್ತಿದೆ ಎಂದು ಶ್ರೀಗಳು ತಿಳಿಸಿದ್ದಾರೆ. ಬೆಳಗಾವಿ ಸುವರ್ಣ ವಿಧಾನಸೌಧ ಅಧಿವೇಶನಕ್ಕೆ ಮುಂಚಿತವಾಗಿ ಪಂಚಮಸಾಲಿ ಮೀಸಲಾತಿ ಘೋಷಿಸಬೇಕೆಂದು ಹಕ್ಕೊತ್ತಾಯಿಸಿ ಡಿಸೆಂಬರ್ 9ರಂದು ಸೋಮವಾರ ಬೆಳಿಗ್ಗೆ 10 ಕ್ಕೆ ಬೆಳಗಾವಿಯ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಿಂದ ಮೆರವಣಿಗೆ ನಡೆಸಲಾಗುತ್ತದೆ.…

ಮೀಸಲಾತಿ ಫೈಟ್; ಮತ್ತೊಮ್ಮೆ ಅಖಾಡಕ್ಕಿಳಿದ ಪಂಚಮಸಾಲಿ ಶ್ರೀ

ಧಾರವಾಡ: ಮೀಸಲಾತಿ ವಿಚಾರದಲ್ಲಿ ಪಂಚಮಸಾಲಿ ಲಿಂಗಾಯತ ಸಮುದಾಯ ಮತ್ತೆ ಹೋರಾಟದ ಅಖಾಡಕ್ಕೆ ಧುಮುಕಿದೆ. ಕೂಡಲಸಂಗಮ ಧರ್ಮ ಕ್ಷೇತ್ರದ ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠದ ಪ್ರಥಮ ಜಗದ್ಗುರು ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದಲ್ಲೇ ಈ ಹೋರಾಟ ಆರಂಭವಾಗಿದೆ. ಈ ಹಿಂದೆಯೇ ಘೋಷಿಸಿದಂತೆ ಅಕ್ಟೊಬರ್ 8 ರಿಂದ 13 ರ ವರೆಗೆ ಈ ಮೀಸಲಾತಿ ಹೋರಾಟ ಮುಂದುವರಿಯಲಿದ್ದು, ಚಳುವಳಿ ಧಾರವಾಡದ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ವಿವಿಧ ಹಂತಗಳಲ್ಲಿ ಸತ್ಯಾಗ್ರಹ ನಡೆಯಲಿದೆ ಎಂದು ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ. ಪಂಚಮಸಾಲಿ – ಗೌಡ – ಮಲೆಗೌಡ – ದೀಕ್ಷೆ ಲಿಂಗಾಯತ ರುಗಳಿಗೆ 2A ಮೀಸಲಾತಿ ಅನುಷ್ಠಾನ ಹಾಗೂ ಲಿಂಗಾಯತ ಉಪ ಸಮಾಜಗಳನ್ನು OBC ಮೀಸಲಾತಿಗೆ ಕೂಡಲೇ ಶಿಫಾರಸ್ಸು ಮಾಡುವಂತೆ , ರಾಜ್ಯ ಸರ್ಕಾರಕ್ಕೆ ಹಕ್ಕೊತ್ತಾಯಿಸಿ ಈ ಹೋರಾಟ ನಡೆಯಲಿದೆ. ಅಕ್ಟೋಬರ್ 13 ನೇ ಶುಕ್ರವಾರ 2023…