ಮಂಗಳೂರು: ಮುಡಾ ಪ್ರಕರಣದ ಕಾರಣಕ್ಜಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಿಲ್ಲ, ಅವರ ರಾಜೀನಾಮೆ ಕೇಳುವ ನೈತಿಕ ಹಕ್ಕು ಬಿಜೆಪಿಯವರಿಗೆ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ರಾಜೀನಾಮೆ ನೀಡುವ ಅಗತ್ಯವೂ ಇಲ್ಲ. ರಾಜಕೀಯಕ್ಕೆ ಕಳಂಕ ತರಲು ಹೊರಟಿರುವ ಬಿಜೆಪಿ ವಿರುದ್ದ ಸಿಎಂ ಕಾನೂನು ಹೋರಾಟ ನಡೆಸಲಿದ್ದಾರೆ. ಈ ಹೋರಾಟದಲ್ಲಿ ಸಿದ್ದರಾಮಯ್ಯ ಗೆಲುವು ಸಾಧಿಸಲಿದ್ದಾರೆ ವಿಶ್ವಾಸ ವ್ಯಕ್ತಪಡಿಸಿದರು. ಬಿ.ಎಸ್.ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಚೆಕ್ ಮೂಲಕ ಲಂಚ ಸ್ವೀಕರಿಸಿದ ಹಾಗೂ ಡಿನೋಟಿಫಿಕೇಶನ್ ಪ್ರಕರಣಗಳಲ್ಲಿ ಕುರಿತಂತೆ ರಾಜ್ಯಪಾಲರು ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿದ್ದಾಗ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾದರೂ ರಾಜೀನಾಮೆ ನೀಡಿರಲಿಲ್ಲ. ಲೋಕಾಯುಕ್ತ ತನಿಖೆಯಲ್ಲಿ ತಪ್ಪಿತಸ್ಥ ಎಂದು ದೃಢಪಟ್ಟ ಬಳಿಕವಷ್ಟೇ ರಾಜೀನಾಮೆ ನೀಡಿದ್ದರು ಎಂದು ಮಂಜುನಾಥ ಭಂಡಾರಿ ನೆನಪಿಸಿದರು. ಬಿಜೆಪಿಯೇತರ ಆಡಳಿತವಿರುವ ರಾಜ್ಯಗಳಲ್ಲಿನ ಸರ್ಕಾರ ಪತನಗೊಳಿಸುವ ಷಡ್ಯಂತ್ರವನ್ನು ಬಿಜೆಪಿ…
Tag: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ
ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ನತ್ತ ಮುಖ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ
ಬೆಂಗಳೂರು: ಬಿಜೆಪಿ, ಜೆಡಿಎಸ್‌ನ ದ್ವಂದ್ವ ನಿಲುವಿನ ಪಾದಯಾತ್ರೆಯಿಂದ ಬೇಸತ್ತ ಹಳೇ ಮೈಸೂರು ಭಾಗದ ಆ ಎರಡೂ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ನತ್ತ ಮುಖ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಹೇಳಿಕೆ ನೀಡಿದ್ದಾರೆ. ಬಿಜೆಪಿ, ಜೆಡಿಎಸ್ ನ ಮೈಸೂರು ಚಲೋ ಪಾದಯಾತ್ರೆಯ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು, ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಮುಂಚಿನ ದಿನ ರಾತ್ರಿ ಹೇಳಿಕೆ ನೀಡಿದ್ದ, ಪೆನ್ ಡ್ರೈವ್ ಪ್ರಕರಣದಲ್ಲಿ ತಮ್ಮ ಕುಟುಂಬದ ಸರ್ವ ನಾಶ ಮಾಡಿದವನ ಸಭೆಗೆ ನಾನು ಹೋಗಬೇಕೇ ಎಂದು ರಾತ್ರಿ ಪ್ರಶ್ನಿಸಿದ್ದ ಎಚ್.ಡಿ.ಕುಮಾರಸ್ವಾಮಿ ಅವರು, ಬೆಳಗಾಗುವುದರೊಳಗೆ ತಮ್ಮ ನಿಲುವು ಬದಲಿಸಿದ್ದಾರೆ. ದಿಢೀರ್ ಆಗಿ ಬಂದು ಪಾದಯಾತ್ರೆಯ ನೇತ್ರತ್ವ ವಹಿಸಿದ್ದಾರೆ. ಮಂತ್ರಿ ಪದವಿಯಿಂದ ಕಿತ್ತು ಹಾಕುವುದಾಗಿ ಅಮಿತ್ ಶಾ ಬೆದರಿಕೆ ಹಾಕಿರಬೇಕು. ಸಿಕ್ಕ ಒಂದು ಸಚಿವ ಪದವಿ ಕೈಬಿಡುವ ಭಯದಲ್ಲಿ ಕುಮಾರಸ್ವಾಮಿ ಅವರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ಮಂಜುನಾಥ…