ವಿರೋಧ ಪಕ್ಷದ ನಾಯಕ ಸ್ಥಾನ ಉಳಿಸಿಕೊಳ್ಳಲು ನವರಂಗಿ ಆಟ? ಅಶೋಕ್ ವಿರುದ್ಧ ರಮೇಶ್ ಬಾಬು ಟೀಕಾಸ್ತ್ರ

ಬೆಂಗಳೂರು: ಪ್ರತಿಪಕ್ಷ ನಾಯಕ ಸ್ಥಾನ ಉಳಿಸಿಕೊಳ್ಳಲು ಆರ್.ಅಶೋಕ್ ನವರಂಗಿ ಆಟ ಆಡುತ್ತಿದ್ದಾರೆ ಎಂದು ಮಾಜಿ ಶಾಸಕರೂ ಆದ ಕೆಪಿಸಿಸಿ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಕಟುವಾಗಿ ಟೀಕಿಸಿದ್ದಾರೆ. ಚನ್ನಪಟ್ಟಣದ ಉಪಚುನಾವಣೆಯಲ್ಲಿ ಮಾತನಾಡುವಾಗ ಆರ್ ಅಶೋಕ್ ರವರು ಕಾಂಗ್ರೆಸ್ ಪಕ್ಷದ ದುರಾಡಳಿತದ ವಿರುದ್ಧ ಉಪಚುನಾವಣೆ ನಡೆಯುತ್ತಿದೆ ಎಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯನ್ನು ಖಂಡಿಸಿರುವ ರಮೇಶ್ ಬಾಬು, ಬಹುತೇಕ ಕಾಂಗ್ರೆಸ್ ಪಕ್ಷಕ್ಕೆ ಅಥವಾ ಕರ್ನಾಟಕದ ಕಾಂಗ್ರೆಸ್ ನಾಯಕರಿಗೆ ಉಪಚುನಾವಣೆಗಳನ್ನು ದುರಾಡಳಿತದ ಮೇಲೆ ನಡೆಸುವ ಅವಶ್ಯಕತೆ ಇಲ್ಲ. ಅಂತಹ ಅವಶ್ಯಕತೆ ಏನಾದರೂ ಇದ್ದರೆ ಅದು ಭಾರತೀಯ ಜನತಾ ಪಕ್ಷದ ನಾಯಕರಿಗೆ ಮತ್ತು ಅವರ ಪಕ್ಷಕ್ಕೆ ಇರುತ್ತದೆ ಎಂದು ಎದಿರೇಟು ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ಮೇಲೆ ಆರೋಪ ಮಾಡುತ್ತಿರುವುದು ಅವರ ವಿರೋಧ ಪಕ್ಷದ ನಾಯಕ ಸ್ಥಾನವನ್ನು ಉಳಿಸಿಕೊಳ್ಳುವ ಹತಾಶ ಪ್ರಯತ್ನ. ಕರ್ನಾಟಕದ ನವರಂಗಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್…

ಸಾರ್ವಜನಿಕ ಹಿತಕ್ಕೆ ಧಕ್ಕೆ ತರುವ ಪ್ರಕರಣಗಳನ್ನು ಹಿಂದಕ್ಕೆ ಪಡೆದಿರುವುದು ಹಿಂದಿನ ಬಿಜೆಪಿ ಸರ್ಕಾರ; ರಮೇಶ್ ಬಾಬು

ಬೆಂಗಳೂರು: ಸಾರ್ವಜನಿಕ ಹಿತಕ್ಕೆ ಧಕ್ಕೆ ತರುವ ಪ್ರಕರಣಗಳನ್ನು ಹಿಂದಕ್ಕೆ ಪಡೆದಿರುವುದು ಹಿಂದಿನ ಬಿಜೆಪಿ ಸರ್ಕಾರವೇ ಹೊರತು ಈಗಿನ ಸಿದ್ದರಾಮಯ್ಯ ಸರ್ಕಾರವಲ್ಲ ಎಂದು ಕೆಪಿಸಿಸಿಮಾಜಿ ಶಾಸಕ, ಕಾಂಗ್ರೆಸ್ ನಾಯಕ ರಮೇಶ್ ಬಾಬು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡತ್ತಾ, ಬಿಜೆಪಿ ನಾಯಕರ ಟೀಕೆಗಳಿಗೆ ತಮ್ಮದೇ ಶೈಲಿಯಲ್ಲಿ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು, ಕಾಂಗ್ರೆಸ್ ಸರ್ಕಾರ ಹಿಂಪಡೆದ ಪ್ರಕರಣಗಳಲ್ಲಿ ಆರನೇ ಪ್ರಕರಣವಾದ ಹಳೇ ಹುಬ್ಬಳಿ ಗಲಭೆ ಪ್ರಕರಣ ಹಿಂಪಡೆಯಬೇಕು ಎಂದು ದಲಿತ ಸಂಘಟನೆಗಳ ಒಕ್ಕೂಟದ ಡಿ.ಬಿ.ಛಲವಾದಿ ಅವರು ರಾಜ್ಯ ಸರ್ಕಾರಕ್ಕೆ ಮನವಿ ಕೊಟ್ಟ ಆಧಾರದ ಮೇಲೆ ಅದನ್ನು ಗೃಹ ಇಲಾಖೆಗೆ ಕಳುಹಿಸಲಾಗಿತ್ತು. ಅವರು ಉಪ ಸಮಿತಿಗೆ ಕಳುಹಿಸಿದ್ದರು, ಈ ಸಮಿತಿಯ ವರದಿ ಅಧಾರದ ಮೇಲೆ ಕೇಸ್ ನಂಬರ್ 63/ 2022 ಹಳೇ ಹುಬ್ಬಳ್ಳಿ ಪ್ರಕರಣ ಹಿಂಪಡೆಯಲಾಗಿದೆ ಎಂದರು. ಸಿಆರ್‌ಪಿಸಿ ಕಲಂ 321 ರಲ್ಲಿ…

ವಿಜಯೇಂದ್ರ ವಿರುದ್ದವೇ ಇಡಿ ಕೇಸ್ ಇದೆ; ಭ್ರಷ್ಟಾಚಾರ ಪ್ರಕರಣಗಳಿವೆ, ರಾಜೀನಾಮೆ ಕೊಡ್ತಾರ ಎಂದ ಕೈ ನಾಯಕರು

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ದ ಕಾಂಗ್ರೆಸ್ ನಾಯಕರು, ಭ್ರಷ್ಟಾಚಾರ ಆರೋಪ ಪ್ರಸ್ತಾಪಿಸಿ ತರಾಟೆಗೆ ತೆಗೆದುಕೊಂಡಿದೆ. ಕೆಪಿಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಕಿಯೋನಿಕ್ಸ್‌ ಅಧ್ಯಕ್ಷ ಶರತ್‌ ಬಚ್ಚೇಗೌಡ, ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್‌ ಬಾಬು ಉಪಸ್ಥಿತಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವ ಪ್ರಿಯಾಂಕ್ ಖರ್ಗೆ, ಚುನಾವಣಾ ಆಯೋಗಕ್ಕೆ ವಿಜಯೇಂದ್ರ ಅವರು ಸಲ್ಲಿಸಿರುವ ಅಫಿಡವಿಟ್ ಅಲ್ಲಿ ಅವರ ಮೇಲಿರುವ ಪ್ರಕರಣಗಳ ಬಗ್ಗೆ ಮಾಹಿತಿ ಕೊಟ್ಟಿದ್ದಾರೆ. 16.09. 2022 ರಂದು ಲೋಕಾಯುಕ್ತದಿಂದ ಇವರ ಮೇಲೆ ಭ್ರಷ್ಟಾಚಾರ ವಿರೋಧಿ ಕಾಯ್ದೆಯಡಿ ಸೆಕ್ಷನ್ 7 A, 9, 10, 13 ಹಾಗೂ 383, 384, 415, 418, 420 ಕಾಯ್ದೆಗಳಡಿ ದೂರು ದಾಖಲಿಸಲಾಗಿದೆ. ಅಕ್ರಮ ಹಣ ವರ್ಗವಣೆ ಪ್ರಕರಣದಲ್ಲಿ ಇವರಿಗೆ ಸಮನ್ಸ್ ಜಾರಿಯಾಗಿದೆ ಎಂದು ನೆನಪಿಸಿದರು. ಸಿಎಂ ಸಿದ್ದರಾಮಯ್ಯರ…

ವಿವಾದದ ಹೇಳಿಕೆ ಮೂಲಕ ಮೋದಿ ಸರ್ಕಾರ, ಸಚಿವ ಸ್ಥಾನಕ್ಕೆ HDK ಮಸಿ; ರಮೇಶ್ ಬಾಬು ಟೀಕಾಸ್ತ್ರ 

ಬೆಂಗಳೂರು: ಮುಡಾ ವಿವಾದದಲ್ಲಿ ಹತಾಶ ಮನೋಭಾವದಿಂದ ಕೇಂದ್ರ ಸಚಿವ ಕುಮಾರಸ್ವಾಮಿರವರು ತಮ್ಮ ಸಚಿವ ಸ್ಥಾನಕ್ಕೆ ಮತ್ತು ಕೇಂದ್ರದ ಬಿಜೆಪಿ ಸರ್ಕಾರಕ್ಕೆ ತಾವೇ ಮಸಿ ಬಳಿಯುತ್ತಿದ್ದಾರೆ ಎಂದು ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಟೀಕಿಸಿದ್ದಾರೆ. ಮಾಧ್ಯಮ ಹೇಳಿಕೆ ಮೂಲಕ ಪ್ರತಿಕ್ರಿಯಿಸಿರುವ ರಮೇಶ್ ಬಾಬು, ಕುಮಾರಸ್ವಾಮಿರವರು ಮೂಡ ಪ್ರಕರಣದಲ್ಲಿ ಮುಖ್ಯಮಂತ್ರಿಯ ಪತ್ನಿ ನಿವೇಶನಗಳನ್ನು ವಾಪಸ್ಸು ನೀಡಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳನ್ನು ಮತ್ತು ಮೂಡ ಆಯುಕ್ತರನ್ನು ರಾಜಕೀಯವಾಗಿ ಟೀಕಿಸಿರುವುದು ಅವರ ಹತಾಶವದದ ಸಂಕೇತವಾಗಿರುತ್ತದೆ ಎಂದಿದ್ದಾರೆ. ತನಿಖಾ ಸಂಸ್ಥೆಗಳು ಮತ್ತು ಸರ್ಕಾರಿ ಅಧಿಕಾರಿಗಳನ್ನು ತಮ್ಮ ಮೂಗಿನ ನೇರಕ್ಕೆ ವರ್ತಿಸುವ ರೀತಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ರವರು ಬೇದರಿಸುತ್ತಿರುವುದು, ತನಿಖೆಯ ಹಾದಿಯನ್ನು ತಪ್ಪಿಸುವ ಉದ್ದೇಶವಾಗಿರುತ್ತದೆ. ಕರ್ನಾಟಕ ಹೈ ಕೋರ್ಟಿನ ತೀರ್ಪಿನಲ್ಲಿ ಮುಖ್ಯಮಂತ್ರಿ ಪತ್ನಿಯು ಪಕ್ಷಗಾರರು ಆಗಿರುವುದಿಲ್ಲ. ಮೂಡ ಹಗರಣದಲ್ಲಿ ನಿವೇಶನಗಳನ್ನು ವಾಪಸ್ಸು ನೀಡುವ ನಿರ್ಧಾರ ಅವರ ವೈಯಕ್ತಿಕ…

‘ಭಾಗ್ಯಲಕ್ಷ್ಮಿ’ ಸೀರೆಯಡಿ ಅವಿತಿರುವ ಹಗರಣ; ಬಿಜೆಪಿ ನಾಯಕರ ಕರ್ಮಕಾಂಡ ಕುರಿತು ತನಿಖೆಗೆ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರದ ಭಾಗ್ಯಲಕ್ಷ್ಮಿ ಯೋಜನೆಯಲ್ಲಿ 2010-11ನೇ ಸಾಲಿನಲ್ಲಿ ಸೀರೆ ವಿತರಣೆ ಹೆಸರಲ್ಲಿ ಸುಮಾರು 23 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಆರೋಪಿಸಿದ್ದಾರೆ. ಈ ಬಹುಕೋಟಿ ಕರ್ಮಕಾಂಡ ಕುರಿತಂತೆ SIT ತನಿಖೆಗೆ ಅವರು ಆಗ್ರಹಿಸಿದ್ದಾರೆ. ಈ ಸಂಬಂಧ ಮಾಜಿ ಶಾಸಕರೂ ಆಗಿರುವ ರಮೇಶ್ ಬಾಬು ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಿರುವ ದೂರು ಕುತೂಹಲ ಕೆರಳಿಸಿದೆ. ಕರ್ನಾಟಕದಲ್ಲಿ ಸರ್ಕಾರಿ ಆದೇಶ ಸಂಖ್ಯೆ – ಮಮಇ- 99 ಮಮಆ 2006ರ ಅನ್ವಯ ಭಾಗ್ಯಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ವತಿಯಿಂದ 2011ನೇ ಸಾಲಿನಲ್ಲಿ ಭಾಗ್ಯಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಅಂದಿನ ಬಿಜೆಪಿ ಸರ್ಕಾರ ಸೀರೆ ವಿತರಿಸುವ ಕಾರ್ಯಕ್ರಮವನ್ನು ಜಾರಿಗೊಳಿಸಿ, ಸುಮಾರು 10,68,996 ಸೀರೆಗಳನ್ನು ಸರ್ಕಾರದಿಂದ ಕೊಳ್ಳಲಾಗಿರುತ್ತದೆ. ಕರ್ನಾಟಕದ ನೇಕಾರರನ್ನು ಹಾಗೂ ಸೀರೆ ಉತ್ಪಾದನೆಯ ಸಹಕಾರ ಸಂಘಗಳನ್ನು ನಿರ್ಲಕ್ಷ್ಯ ಮಾಡಿ…