ಕೋವಿಡ್‌ ಹಗರಣ: ಬಿಎಸ್‌ವೈ, ಶ್ರೀರಾಮುಲು ಬಗ್ಗೆ ತನಿಖೆಗೆ ಆಯೋಗ ಶಿಫಾರಸು; ಹೆಣ ಇಟ್ಟು ಹಣ ಮಾಡಿದ ಬಿಜೆಪಿ ನಾಯಕರು ಎಂದ ರಮೇಶ್ ಬಾಬು

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿ ಇದ್ದ ಸಂದರ್ಭ ಕೋವಿಡ್‌ 19 ಚಿಕಿತ್ಸೆ ಹಾಗೂ ನಿರ್ವಹಣೆ ಹೆಸರಿನಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿ ನಿವೃತ್ತ ನ್ಯಾಯಮೂರ್ತಿ ಜಾನ್‌ ಮೈಕಲ್‌ ಡಿ ಕುನ್ಹಾ ಅವರ ನೇತೃತ್ವದಲ್ಲಿ ರಚಿಸಿದ್ದ ಆಯೋಗವು ಹಿಂದಿನ ಸರ್ಕಾರದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಆಗಿನ ಆರೋಗ್ಯ ಸಚಿವರನ್ನು ತನಿಖೆ ನಡೆಸಲು ಶಿಫಾರಸ್ಸು ಮಾಡಿದೆ. ಏಪ್ರಿಲ್‌ 2020ರಲ್ಲಿ ಚೀನಾದ ಎರಡು ಕಂಪನಿಗಳಿಂದ 3 ಲಕ್ಷ ಪಿಪಿಇ ಕಿಟ್‌ಗಳನ್ನು ಅತ್ಯಂತ ದುಬಾರಿ ದರಗಳಲ್ಲಿ ಖರೀದಿಸಿದ್ದಕ್ಕೆ ಯಾವುದೇ ನಿಖರವಾದ ಕಾರಣವಿಲ್ಲಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ ಎನ್ನಲಾಗಿದೆ. ಪಿಪಿಇ ಕಿಟ್‌ ಖರೀದಿ ಪ್ರಕ್ರಿಯೆ ಸಂದರ್ಭ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದರು ಮತ್ತು ಶ್ರೀರಾಮುಲು ಆರೋಗ್ಯ ಸಚಿವರಾಗಿದ್ದರು. 1988ರ ಭ್ರಷ್ಟಾಚಾರ ತಡೆ ಕಾಯ್ದೆ ಮತ್ತು ವಿಶ್ವಾಸಾರ್ಹತೆ ಉಲ್ಲಂಘನೆ ಅಪರಾಧದ ಅನ್ವಯ ಸೆಕ್ಷನ್‌ 7 ಮತ್ತು 11ರ ಅಡಿ ತನಿಖೆ ನಡೆಸುವಂತೆ ಆಯೋಗವು ಶಿಫಾರಸು ಮಾಡಿದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ…