ಬೆಂಗಳೂರು: ‘ಎತ್ತಿನಹೊಳೆ ಯೋಜನೆ’ಯು ಬೆಟ್ಟ ಅಗೆದು ಇಲಿ ಹಿಡಿದ ಯೋಜನೆಯಂತಾಗಿದೆ ಎಂದು ವಿಧಾನ ಪರಿಷತ್ತಿನ ಬಿಜೆಪಿ ಶಾಸಕ ಸಿ.ಟಿ.ರವಿ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಸಂಬಂಧ ಸಿ.ಟಿ.ರವಿ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಬರೆದಿರುವ ಬಹಿರಂಗ ಪತ್ರ ತೀವ್ರ ಕುತೂಹಲ ಕೆರಳಿಸಿದೆ. ಎತ್ತಿನಹೊಳೆ ಯೋಜನೆ ಕುರಿತಂತೆ ತಾವು ಮತ್ತು ಉಪಮುಖ್ಯಮಂತ್ರಿಗಳು ನೀಡಿದ ಸಾರ್ವಜನಿಕ ಹೇಳಿಕೆ ಮತ್ತು ಜಾಹೀರಾತನ್ನು ನೋಡಿ, ನಮಗಿರುವ ಸಾರ್ವಜನಿಕರ ಆತಂಕವನ್ನು ದೂರ ಮಾಡಬೇಕೆಂದು ಆಗ್ರಹಿಸಿರುವ ಅವರು, ಕೆಲವು ಪ್ರಶ್ನೆಗಳನ್ನು ಸಿಎಂ ಅವರ ಮುಂದಿಟ್ಟಿದ್ದಾರೆ. ಆರಂಭದಲ್ಲಿ ಈ ಯೋಜನೆಯ ಉದ್ದೇಶವೇ ನಿರಂತರ ಬರದ ದವಡೆಗೆ ಸಿಲುಕಿರುವ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ತುಮಕೂರು, ಹಾಸನ ಮತ್ತು ರಾಮನಗರ ಜಿಲ್ಲೆಯ ಜನರಿಗೆ ಕುಡಿಯುವ ನೀರು ಒದಗಿಸುವುದು. 38 ಪಟ್ಟಣಗಳಿಗೆ, 6657 ಗ್ರಾಮಗಳಿಗೆ, 527 ಕೆರೆ ತುಂಬಿಸುವುದು, 75 ಲಕ್ಷ ಜನರಿಗೆ, ಶುದ್ಧ ಕುಡಿಯುವ…