ಚನ್ನಪಟ್ಟಣ ರಣಾಂಗಣ; ಹೆಚ್‌ಡಿಕೆ ಪೂಜೆಯ ವೇಳೆ ಅಚ್ಚರಿಯ ಸನ್ನಿವೇಶ; ನಿಖಿಲ್ ಗೆಲುವಿನ ಶುಭ ಸೂಚನೆ ಎಂದ ಜೆಡಿಎಸ್ ನಾಯಕರು

ಹಾಸನ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯು ರಾಜಕೀಯ ಪ್ರತಿಷ್ಠೆಯ ಕಣ ಮಾತ್ರವಲ್ಲ, ನಿಖಿಲ್ ಕುಮಾರಸ್ವಾಮಿಯ ರಾಜಕೀಯ ಭವಿಷ್ಯದ ನಿರ್ಣಯವೂ ಹೌದು. ಹಾಗಾಗಿ ಎನ್‌ಡಿಎ ಮಿತ್ರ ಪಕ್ಷಗಳು ಈ ಚುನಾವಣೆಯಲ್ಲಿ ಗೆಲ್ಲಲು ರಣತಂತ್ರ ರೂಪಿಸುತ್ತಿವೆ. ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ಸಿ.ಪಿ. ಯೋಗೇಶ್ವರ್ ನಡುವೆ ನೇರ ಹಣಾಹಣಿ ಎರ್ಪಟ್ಟಿದ್ದು ಕದನ ಕೌತುಕ ಸೃಷ್ಟಿಸಿದೆ. ಈ ನಡುವೆ ಎಚ್.ಡಿ.ಕುಮಾರಸ್ವಾಮಿ ಕುಟುಂಬ ತಮ್ಮ ಪುತ್ರನ ಗೆಲುವಿಗಾಗಿ ಟೆಂಪಲ್ ರನ್ ಕೈಗೊಂಡಿದ್ದು, ಪೂಜೆಯ ವೇಳೆ ಅಚ್ಚರಿಯ ಪ್ರಸಂಗವೊಂದು ನಡೆದಿದೆ. ದೇವರ ವಿಗ್ರಹದ ಬಲಗಡೆಯಿಂದ ಹೂವು ಬಿದ್ದಿದ್ದು, ಈ ಬಗ್ಗೆ ಬಗೆಬಗೆಯ ಚರ್ಚೆ ಶುರುವಾಗಿದೆ. ಕುಮಾರಸ್ವಾಮಿಯವರು ಭಾನುವಾರ ಪತ್ನಿ ಅನಿತಾ ಹಾಗೂ ಸೊಸೆ, ಮೊಮ್ಮಗು ಜೊತೆಗೆ ಹಾಸನಾಂಬೆ ಜಾತ್ರೆಯಲ್ಲಿ ಭಾಗವಹಿಸಿದರು. ಬಳಿಕ ಸಿದ್ದೇಶ್ವರ ಸ್ವಾಮಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಪೂಜೆ ನೆರವೇರಿತ್ತಿರುವಾಗಲೇ ವಿಗ್ರಹದ ಬಲಗಡೆಯಿಂದ ಹೂ…

ಕೃಷ್ಣ ಬೈರೇಗೌಡ ಅವರು ಅಸಹಾಯಕ ಸಚಿವ? ಏನಿದು ಟ್ವೀಟಾಸ್ತ್ರ?

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ದದ ಡಿನೋಟಿಫಿಕೇಷನ್ ಆರೋಪ ಮಾಡಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ ಬಗ್ಗೆ ಜಾತ್ಯತೀತ ಜನತಾ ದಳ ಗರಂ ಆಗಿದೆ. ಯಾರನ್ನೋ ಮೆಚ್ಚಿಸಲು ಪ್ರೆಸ್ ಮೀಟ್ ಮಾಡಿದ್ದಾರೆ ಎಂದು ಸಚಿವ ಕೃಷ್ಣ ಬೈರೇಗೌಡ ವಿರುದ್ಧ ಜೆಡಿಎಸ್ ಪಕ್ಷ ಟೀಕಾಸ್ತ್ರ ಪ್ರಯೋಗಿಸಿದೆ. ಈ ಕುರಿತಂತೆ ಟ್ವೀಟ್ ಮಾಡಿರುವ ಜೆಡಿಎಸ್, ಸಚಿವ ಕೃಷ್ಣ ಬೈರೇಗೌಡ ಅವರ ಅಸಹಾಯಕತೆಗೆ ಮರುಕವಿದೆ ಎಂದು ಟೀಕಿಸಿದೆ. ಸಚಿವ ಕೃಷ್ಣ ಬೈರೇಗೌಡ ಅವರ ಅಸಮರ್ಥತೆಯಿಂದ ರಾಜ್ಯದಲ್ಲಿ ಕಂದಾಯ ಇಲಾಖೆ ಹಳ್ಳ ಹಿಡಿದಿದೆ. ಸಬ್ ರಿಜಿಸ್ಟ್ರಾರ್ ಕಚೇರಿಗಳು ಭ್ರಷ್ಟಾಚಾರದ ಕೊಂಪೆಯಾಗಿದ್ದು, ಲಂಚವಿಲ್ಲದೇ ಅಲ್ಲಿ ಯಾವುದೇ ಕಡತಗಳು ಮೇಲೇಳುವುದಿಲ್ಲ ಎಂದು ಆರೋಪಿಸಿರುವ ಜೆಡಿಎಸ್, ಯಾರನ್ನೋ ಮೆಚ್ಚಿಸಲು ಪ್ರೆಸ್ ಮೀಟ್ ಮಾಡುವುದನ್ನು ಬಿಟ್ಟು, ಕಂದಾಯ ಇಲಾಖೆಯಲ್ಲಿನ ಭ್ರಷ್ಟಾಚಾರಕ್ಕೆ ಮೊದಲು ಕಡಿವಾಣ ಹಾಕಿ ಎಂದು ಎದಿರೇಟು ನೀಡಿದೆ. ಗುಂಡಿ ಮುಚ್ಚಿ ಎಂದು ಅಸಹಾಯಕರಾಗಿ ಟ್ವೀಟ್ ಮಾಡಿದ್ರಲ್ಲ, ಆ ರಸ್ತೆ…