ತುಮಕೂರು-ಯಶವಂತಪುರ ಮಾರ್ಗವಾಗಿ ಮೆಮು ರೈಲು ಓಡಾಟಕ್ಕೆ ಅಸ್ತು.

ಬೆಂಗಳೂರು: ತುಮಕೂರು ಜನತೆಯ ಬಹುದಿನಗಳ ಬೇಡಿಕೆಯಾದ ರೆಗ್ಯುಲರ್ ಪ್ಯಾಸೆಂಜರ್ ಫ್ರೆಂಡ್ಲಿ ಮೆಮು ಟ್ರೈನ್ ಸರ್ವಿಸ್ ಓಡಾಟಕ್ಕೆ ರೈಲ್ವೆ ಇಲಾಖೆ ಅನುಮೋದನೆ ನೀಡಿರುವುದಾಗಿ ಕೇಂದ್ರ ಸಚಿವ ವಿ. ಸೋಮಣ್ಣರವರು ತಿಳಿಸಿದ್ದಾರೆ. ತುಮಕೂರುನಿಂದ ಬೆಂಗಳೂರು ಹಾಗೂ ಬೆಂಗಳೂರಿಂದ ತುಮಕೂರಿಗೆ ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಪ್ಯಾಸೆಂಜರ್ ಟ್ರೈನ್ ಓಡಾಡಿಸಲು ತುಮಕೂರು ಜನತೆಯ ಬಹಳ ದಿನಗಳ ಬೇಡಿಕೆ ಇತ್ತು, ತುಮಕೂರಿನ ಸಂಸದರೂ ಆದ ಸಚಿವ ವಿ.ಸೋಮಣ್ಣ ಅವರ ಬಳಿ ತುಮಕೂರಿನ ಜನತೆ ತಮ್ಮ ಬೇಡಿಕೆಯನ್ನು ಇಟ್ಟಿದ್ದರು , ಇದಕ್ಕೆ ಸ್ಪಂದಿಸಿದ ಸಚಿವರು ಈ ಬಗ್ಗೆ ಕ್ರಮ ಜರುಗಿಸುವುದಾಗಿ ತುಮಕೂರಿನ ಜನತೆಗೆ ಅವರ ಮೊದಲ ಭೇಟಿಯಲ್ಲೇ ಭರವಸೆ ನೀಡಿದ್ದರು. ಇದರ ಫಲವಾಗಿ 02.09.2024 ರಂದು ರೈಲ್ವೆ ಇಲಾಖೆ ತುಮಕೂರು-ಯಶವಂತಪುರ ಮಾರ್ಗವಾಗಿ ಮೆಮು (MEMU) ಟೈನ್ ಓಡಾಟಕ್ಕೆ ಅನುಮೋದನೆ ಹೊರಡಿಸಿದೆ ಈ ‘ಮೆಮು’ ರೈಲು ಸೇವೆ ಇಂತಿದೆ:  ತುಮಕೂರು-ಯಶವಂತಪುರ ಮೆಮು ಟ್ರೈನ್ 06201(66561): ಬೆಳಗ್ಗೆ…