ಬೆಂಗಳೂರು: ಹುಲಿ ಉಗುರು ಪ್ರಕರಣದಲ್ಲಿ ಬಿಗ್‌ಬಾಸ್ ರಿಯಾಲಿಟಿ ಶೋ ಸ್ಪರ್ಧಿ ವರ್ತೂರು ಸಂತೋಷ್ ಬಂಧನವಾದ ನಂತರ, ಹುಲಿ ಉಗುರು ಹೊಂದಿದ್ದಾರೆಂಬ ಆರೋಪದಲ್ಲಿ ಗಣ್ಯರನೇಕರು ಅರಣ್ಯ ಇಲಾಖೆಯ ಅಧಿಕಾರಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇದೇ ವೇಳೆ, ಏಕಾಏಕಿ ವಣ್ಯ ಜೀವಿ ಸಂರಕ್ಷಣಾ ಕಾಯ್ದೆಯ ಪ್ರಯೋಗಕ್ಕಿಳಿದಿರುವ ಅರಣ್ಯಾಧಿಕಾರಿಗಳ ನಡೆಗೆ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಲೆನಾಡು, ಕರಾವಳಿ ಭಾಗದ ಅನೇಕ ಮನೆಗಳಲ್ಲಿ ಹುಲಿ ಉಗುರು ಸೇರಿದಂತೆ ವನ್ಯಜೀವಿಗಳ ಉತ್ಪನ್ನಗಳನ್ನು ಇಟ್ಟುಕೊಳ್ಳುವುದು ಬಹಳ ವರ್ಷಗಳಿಂದ ನಡೆಯುತ್ತಿದೆ. ಈ ಕಾರಣಕ್ಕಾಗಿ ಜನರನ್ನು ಏಕಾಏಕಿ ಬಂಧಿಸುವುದು ಸರಿಯಲ್ಲ. ಈ ಕುರಿತು ಸರ್ಕಾರ ಮಧ್ಯಪ್ರವೇಶಿಸುವುದು ಅವಶ್ಯ ಎಂದವರು ಹೇಳಿದ್ದಾರೆ. ಕೆಲವೊಂದು ದರ್ಗಾಗಳಲ್ಲಿ ನವಿಲು ಗರಿಯನ್ನು ಬಳಸುವ ಪದ್ದತಿ ಇದೆ. ನವಿಲು ಗರಿಯನ್ನು ಇಟ್ಟುಕೊಳ್ಳುವಂತಿಲ್ಲ ಎಂದಾದರೆ ನವಿಲು ಗರಿ ಬಳಕೆ ಮಾಡುವವರನ್ನು ಬಂಧಿಸಲಿ ಎಂದು ಅರಗ ಜ್ಞಾನೇಂದ್ರ ಅವರು ರಾಜ್ಯ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.…