ಪಟಾಕಿ ಬ್ಯಾನ್ ಹಿಂದೂ ಹಬ್ಬಗಳಲ್ಲಿ ಮಾತ್ರ ಯಾಕೆ? ಯತ್ನಾಳ್ ಪ್ರಶ್ನೆ

ಬೆಂಗಳೂರು:  ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಕೆಮಿಕಲ್ ಪಟಾಕಿಗಳನ್ನು ಹೊರತುಪಡಿಸಿ ಬೇರೆಯಾವುದೇ ಪಟಾಕಿಗಳನ್ನು ಹೊಡೆಯುವುದನ್ನು ನಿಲ್ಲಿಸಬಾರದು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸರ್ಕಾರನ್ನು ಒತ್ತಾಯಿಸಿದ್ದಾರೆ.‌ ನಾವು ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸುತ್ತೇವೆ, ಜನವರಿ 1ಕ್ಕೆ, ರಾಜಕೀಯ ಕಾರ್ಯಕ್ರಮಗಳಿಗೆ ಇಲ್ಲದ ಪಟಾಕಿ ಬ್ಯಾನ್ ಈಗ ಹಿಂದೂ ಹಬ್ಬಗಳಲ್ಲಿ ಯಾಕೆ? ಎಂದವರು ಪ್ರಶ್ನಿಸಿದ್ದಾರೆ. ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಹಿಂದೂ ಹಬ್ಬಗಳಲ್ಲಿ ಮಾತ್ರ ಗಮನಹರಿಸುವುದಾ? ಎಂದು ಟ್ವೀಟ್ ಮಾಡಿ ಅಭಿಪ್ರಾಯ ವ್ಯಕ್ತಪಡಿಸಿರುವ ಯತ್ನಾಳ್, ಪ್ರಜೆಗಳ ಪ್ರತಿನಿಧಿಯಾಗಿ ನಾನು ಹಿಂದುಗಳಿಗೆ ಹಬ್ಬ ಆಚರಣೆ ಮಾಡಲು ಯಾವುದೇ ತೊಂದರೆ ಕೊಡಬಾರದು, ಅನಾವಶ್ಯಕ ಕೇಸುಗಳನ್ನು ಹಾಕಬಾರದು ಎಂದು ಒತ್ತಾಯಿಸುತ್ತೇನೆ ಎಂದಿದ್ದಾರೆ. ಮಾನ್ಯ ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಕೆಮಿಕಲ್ ಪಟಾಕಿಗಳನ್ನು ಹೊರತುಪಡಿಸಿ ಬೇರೆಯಾವುದೇ ಪಟಾಕಿಗಳನ್ನು ಹೊಡೆಯುವುದನ್ನು ವಿಜಯಪುರ ಜಿಲ್ಲಾಡಳಿತ ನಿಲ್ಲಿಸಬಾರದು. ನಾವು ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸುತ್ತೇವೆ, ಜನವರಿ 1ಕ್ಕೆ, ರಾಜಕೀಯ ಕಾರ್ಯಕ್ರಮಗಳಿಗೆ ಇಲ್ಲದ…

ವಿದ್ಯಾರ್ಥಿವೇತನವನ್ನು ಕಡಿತ: ಸರ್ಕಾರದ ಕ್ರಮಕ್ಕೆ ಯತ್ನಾಳ್ ಆಕ್ಷೇಪ

ಬೆಂಗಳೂರು: ವಿದ್ಯಾರ್ಥಿವೇತನವನ್ನು ಕಡಿತಗೊಳಿಸಿ ವೈದ್ಯರಾಗುವ ಕನಸು ಹೊತ್ತಿದ್ದ ಬಡ ವಿದ್ಯಾರ್ಥಿಗಳಿಗೆ ಕಾಂಗ್ರೆಸ್ ಸರ್ಕಾರ ಆರ್ಥಿಕ ಹೊರೆಯನ್ನು ಹೊರೆಸಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಸನಾಧಾನ ಹೊರಹಾಕಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ಈ ಕ್ರಮಕ್ಕೆ ಆಕ್ಏಪ ವ್ಯಕ್ತಪಡಿಸರುವ ಅವರು, ಈ ವಿವೇಚನಾರಹಿತವಾದ ನಿರ್ಧಾರವನ್ನು ಸರ್ಕಾರ ಕೂಡಲೇ ಹಿಂಪಡೆಯಬೇಕು. ಆರ್ಥಿಕವಾಗಿ ಹಿಂದುಳಿದ meritorious ವಿದ್ಯಾರ್ಥಿಗಳಿಗೆ ಸೂಕ್ತ ಪ್ರೋತ್ಸಾಹ ನೀಡಬೇಕಾದದ್ದು ಸರ್ಕಾರದ ಕರ್ತವ್ಯ.ಈ ಕೂಡಲೇ ಈ ಪರಿಷ್ಕೃತ ಆದೇಶವನ್ನು ಹಿಂಪಡೆದು, ಬಡ ಕಾರ್ಮಿಕರ ಮಕ್ಕಳಿಗೆ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. https://x.com/BasanagoudaBJP/status/1722190236959023442?t=z9SQqSXrqdmThM724-ZgdA&s=08