ಶಾಸಕ ಮುನಿರತ್ನ ವಿರುದ್ದ ಪ್ರಕರಣ; ಎಸ್‌ಐಟಿ ರಚಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಆರ್​.ಆರ್.ನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಪ್ರಕರಣಗಳ‌ ತನಿಖೆಗೆ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದೆ. ಹಿರಿಯ ಪೊಲೀಸ್ ಅಧಿಕಾರಿ ಬಿ.ಕೆ.‌ಸಿಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ) ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಗುತ್ತಿಗೆದಾರನಿಗೆ ಜೀವ ಬೆದರಿಕೆ; ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಎಫ್​ಐಆರ್​

ಬೆಂಗಳೂರು: ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿದ ಆರೋಪ ಸಂಬಂಧದ ಸಂಬಂಧಿಸಿದಂತೆ ಆರ್​.ಆರ್. ನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಶಾಸಕ ಮುನಿರತ್ನ ನನಗೆ ಕೊಲೆ ಬೆದರಿಕೆ, ಜಾತಿ ನಿಂದನೆ ಮಾಡಿದ್ದಾರೆ ಎಂದು ಗುತ್ತಿಗೆದಾರ ಚಲುವರಾಜು ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ಈ ಪ್ರಕರಣ ಬಗ್ಗೆ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಜೀವ ಬೆದರಿಕೆ, ಜಾತಿ ನಿಂದನೆ ಮಾಡಿದ ಆರೋಪದಡಿಯಲ್ಲಿ ಪ್ರಕರಣಗಳು ದಾಖಲಾಗಿವೆ. ಎನ್ನಲಾಗಿದೆ. ಶಾಸಕ ಮುನಿರತ್ನ, ಆಪ್ತ ಸಹಾಯಕ ವಿಜಯ್ ಕುಮರ್, ಸೆಕ್ಯೂರಿಟಿ ಅಭಿಷೇಕ್ ಮತ್ತು ಆಪ್ತ ವಸಂತ್ ಕುಮಾರ್ ಅವರನ್ನು ಆರೋಪಿಗಳೆಂದು ಪೊಲೀಸರು ಗುರುತಿಸಿದ್ದಾರೆ.